Homeಕರ್ನಾಟಕರಾಜ್ಯಸಭಾ ಚುನಾವಣೆ: ಜೆಡಿಎಸ್‌ ಅಭ್ಯರ್ಥಿ ಹಾಕಿದ್ದಕ್ಕಾಗಿ ನಾವು ಒಟ್ಟಾಗಿ ಹೋಟೆಲ್‌ಗೆ ಹೋಗಿದ್ದು: ಸಿದ್ದರಾಮಯ್ಯ

ರಾಜ್ಯಸಭಾ ಚುನಾವಣೆ: ಜೆಡಿಎಸ್‌ ಅಭ್ಯರ್ಥಿ ಹಾಕಿದ್ದಕ್ಕಾಗಿ ನಾವು ಒಟ್ಟಾಗಿ ಹೋಟೆಲ್‌ಗೆ ಹೋಗಿದ್ದು: ಸಿದ್ದರಾಮಯ್ಯ

ಜೆಡಿಎಸ್‌ಗೆ ಇರುವುದೇ 19 ಶಾಸಕರು. ಹೀಗಿರುವಾಗ ಅವರು ಅಭ್ಯರ್ಥಿ ಕಣಕ್ಕಿಳಿಸಬಾರದಿತ್ತು. ಆದರೂ, ಉದ್ದೇಶಪೂರ್ವಕವಾಗಿ ಕಣಕ್ಕಿಳಿಸಿದ್ದಾರೆ. ಹೀಗಾಗಿ ನಾವು ಹೋಟೆಲ್‌ಗೆ ಹೋಗಿ ಒಟ್ಟಾಗಿ ಮತದಾನಕ್ಕೆ ಬಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ರಾಜ್ಯಸಭಾ ಚುನಾವಣೆ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, “ರಾಜ್ಯಸಭಾ ಚುನಾವಣೆಯಲ್ಲಿ ಬೇರೆ ಪಕ್ಷದ ಶಾಸಕರೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ನಿರೀಕ್ಷೆ ಇದೆ”‌ ಎಂದರು.

“ಸುಲಭವಾಗಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ನಮ್ಮ ಪಕ್ಷದ 134 ಶಾಸಕರ ಜತೆಗೆ ಪಕ್ಷೇತರರಾದ ಲತಾ ಮಲ್ಲಿಕಾರ್ಜುನ, ಕೆ.ಎಚ್. ಪುಟ್ಟಸ್ವಾಮಿ ಗೌಡ, ಸರ್ವೋದಯ ಕರ್ನಾಟಕದ ದರ್ಶನ್ ಪುಟ್ಟಣ್ಣಯ್ಯ ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿ. ಜನಾರ್ದನ ರೆಡ್ಡಿ ಕೂಡ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಲಿದ್ದಾರೆ. ಮೂರೂ ಮಂದಿಯ ಗೆಲುವಿಗೆ ಬೇಕಾಗುವಷ್ಟು ಮತಗಳು ನಮ್ಮ‌ ಬಳಿ ಇವೆ” ಎಂದು ಹೇಳಿದರು.

ಆತ್ಮ ಸಾಕ್ಷಿಯ ಮತಗಳು ಬರಲಿವೆ ಎಂಬ ಜೆಡಿಎಸ್ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಜೆಡಿಎಸ್ ಪಕ್ಷದವರಿಗೆ ಆತ್ಮವೂ ಇಲ್ಲ, ಸಾಕ್ಷಿಯೂ ಇಲ್ಲ. ನಾವು ಯಾವುದೇ ಆಸೆ, ಆಮಿಷ ಒಡ್ಡಿಲ್ಲ. ಆ ರೀತಿ ಮಾಡುವುದು‌ ಜೆಡಿಎಸ್ ಪಕ್ಷದವರು” ಎಂದು ವಾಗ್ದಾಳಿ ನಡೆಸಿದರು.

ಶಾಸಕರಿಗೆ ಆಮಿಷ

ಅಡ್ಡಮತ ವಿಚಾರವಾಗಿ ಕಾನೂನು ತಿದ್ದಿ ಎಫ್.ಐ.ಆರ್. ಹಾಕಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, “ಅವರಿಗೆ ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ , ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಬೆದರಿಕೆ ಹಾಕಿರುವುದಕ್ಕೆ ಎಫ್.ಐ.ಆರ್ ಹಾಕಲಾಗಿದೆ ಎಂದರು. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments