Homeಕರ್ನಾಟಕರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ | ಬಾಂಬರ್‌ ಹುಡುಕುತ್ತ ಜಿಲ್ಲೆ ಜಿಲ್ಲೆಗೆ ಹೊರಟ ಎನ್‌ಐಎ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ | ಬಾಂಬರ್‌ ಹುಡುಕುತ್ತ ಜಿಲ್ಲೆ ಜಿಲ್ಲೆಗೆ ಹೊರಟ ಎನ್‌ಐಎ

ವೈಟ್ ಫೀಲ್ಡ್ ಸಮೀಪದ ಬ್ರೂಕ್‌ ಫೀಲ್ಡ್‌ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬಾಂಬರ್ ನಗರದ ಸುಜಾತ ಸರ್ಕಲ್‌ನಲ್ಲಿ ಬಸ್ ಹತ್ತಿ ತುಮಕೂರಿನಲ್ಲಿ ಇಳಿದು ಬಳ್ಳಾರಿ ಹೋಗಿ ಅಲ್ಲಿಂದ ಮಂತ್ರಾಲಯ- ಗೋಕರ್ಣ ಬಸ್‌ ಹತ್ತಿ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

ಬಾಂಬರ್ ಭಟ್ಕಳಕ್ಕೆ ತೆರಳಿರುವ ಶಂಕೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಅಧಿಕಾರಿಗಳು ತುಮಕೂರು ಹಾಗೂ ಬಳ್ಳಾರಿ‌ ಬಸ್‌ ನಿಲ್ದಾಣಕ್ಕೆ ಧಾವಿಸಿ ಮಾಹಿತಿ ಕಲೆ ಹಾಕಿದ್ದಾರೆ.

ನಿನ್ನೆ ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಎನ್‌ಐಎ ತಂಡ ಮಾಹಿತಿ ಪಡೆದಿದ್ದು ಬಳ್ಳಾರಿ ಮತ್ತು ತುಮಕೂರು ಪೊಲೀಸರು ಸಹಕಾರ ನೀಡಿದ್ದಾರೆ. ಬೆಂಗಳೂರಿಂದ ಎರಡು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ ಸುಳಿವು ಕೊಟ್ಟವರಿಗೆ 10 ಲಕ್ಷ ಇನಾಮು ಘೋಷಣೆ ಮಾಡಿ, ಶಂಕಿತನ ಸುಳಿವು ನೀಡಿದವರ ಹೆಸರು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ಇಲ್ಲಿಯವರೆಗೆ ಆರೋಪಿ ಚಹರೆ ಕಾಣುವ ಫೋಟೋ ಇರಲಿಲ್ಲ. ಎನ್‌ಐಎ ಬಿಡುಗಡೆ ಮಾಡಿರುವ ಫೋಟೋದಲ್ಲಿ ಅಲ್ಪ ಸ್ವಲ್ಪ ಮುಖ ಕಾಣಿಸುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments