Homeಕರ್ನಾಟಕಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನ ಬಿಟ್ಟು ಮೂವರಿಗೆ ಜಾಮೀನು

ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನ ಬಿಟ್ಟು ಮೂವರಿಗೆ ಜಾಮೀನು

ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಮುನಿರತ್ನ ಹೊರತು ಪಡಿಸಿ ಉಳಿದವರ ಮೂವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಸೋಮವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್, ಕಿರಣ್ ಮತ್ತು ಮಂಜುನಾಥ್ ಗೆ ಜಾಮೀನು ಮಂಜೂರು ಮಾಡಿದರು.

ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್‌ ದಾಖಲಾಗಿದೆ. ಮುನಿರತ್ನ ನಾಯ್ಡು (A1), ವಿಜಯ್‌ ಕುಮಾರ್‌ (A2), ಸುಧಾಕರ (A3), ಕಿರಣ್‌ ಕುಮಾರ್‌ (A4), ಲೋಹಿತ್‌ ಗೌಡ (A5), ಮಂಜುನಾಥ (A6), ಲೋಕಿ (A7) ಎಂಬವರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಖಾಸಗಿ ರೆಸಾರ್ಟ್‌ನಲ್ಲಿ ತಮ್ಮ ಮೇಲೆ ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಮಹಿಳೆ ದೂರು ರಾಮನಗರದ ಕಗ್ಗಲೀಪುರ ಠಾಣೆಗೆ ದೂರು ನೀಡಿದ್ದರು. ಈಗ ಮುನಿರತ್ನ ನ್ಯಾಯಾಂಗ ಬಂಧನದಲ್ಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments