ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದೆ.
ಮಂಗಳವಾರ (ಅಕ್ಟೋಬರ್ 15) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕ ದಿನವೇ ಅತ್ಯಾಚಾರ ಪ್ರಕರಣದ ಮುನಿರತ್ನ ಮತ್ತೆ ಬಂಧನವಾಗಿದ್ದರು. ಅವರು ಬಿಡುಗಡೆ ಆಗುತ್ತಿರುವ ಹೊತ್ತಿನಲ್ಲಿಯೇ ಪರಪ್ಪನ ಅಗ್ರಹಾರದ ಬಳಿ ಅತ್ಯಾಚಾರ ಕೇಸ್ನಲ್ಲಿ ಪೊಲೀಸರು ಬಂಧಿಸಿದ್ದರು.
ಜೆಪಿಯಲ್ಲಿ ಸಕ್ರಿಯರಾಗಿದ್ದ ರಾಜರಾಜೇಶ್ವರಿ ನಗರದ ಸಾಮಾಜಿಕ ಕಾರ್ಯಕರ್ತೆ 40 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಐಪಿಸಿ ಸೆಕ್ಷನ್ 354A, 354C, 376, 506, 504, 120(b), 149, 384, 406, 308 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.