ಆರ್ಸಿಬಿ (ರಾಯಣ್ಣ ಚನ್ನಮ್ಮ ಬ್ರಿಗೇಡ್) ಟಿ-20 ಆಡೋಕೆ ಮಾತ್ರ ಚೆನ್ನಾಗಿರುತ್ತೆ. ಆದರೆ ನಾನು ಟೆಸ್ಟ್ ಮ್ಯಾಚ್ ಆಡುವುದಕ್ಕೆ ಬಂದವನು. ನಾನು ಸುದೀರ್ಘವಾಗಿ ಓಡುವಂತಹ ಕುದುರೆ. ವಿಜಯೇಂದ್ರ ತಾಕತ್ತಿನ ಬಗ್ಗೆ ಅರಿತುಕೊಂಡಿರುವುದು ಬಹಳ ಸಂತಸ ಎಂದು ಬಿಜೆಪಿ ರಾಜ್ಯಾಧ್ಯಕ್ಷ ತಿರುಗೇಟು ನೀಡಿದ್ದಾರೆ.
ಬಿಜೆಪಿಯಲ್ಲಿ ಭಿನ್ನಮತ ಮತ್ತಷ್ಟು ತೀವ್ರಗೊಂಡಿದ್ದು, ಇದೀಗ ತಮ್ಮ ವಿರುದ್ಧ ಆರ್ಸಿಬಿ ಕಟ್ಟಲು ಮುಂದಾಗಿರುವ ಕೆ ಎಸ್ ಈಶ್ವರಪ್ಪಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಪರೋಕ್ಷ ಎಚ್ಚರಿಕೆ ಕೂಡ ಕೊಟ್ಟರು.
“ನಾನು ಲಂಬಿ ರೇಸ್ ಕಾ ಗೋಡಾ. ಪಕ್ಷಕ್ಕೆ ದ್ರೋಹ ಮಾಡಿ ಪಕ್ಷ ಬಿಟ್ಟೋದವರು ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಯೋಗ್ಯತೆ ಕಳೆದುಕೊಂಡಿದ್ದಾರೆ. ವಿಜಯೇಂದ್ರ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲು ಭಗವಂತ ಬುದ್ದಿ ನೀಡಿದ್ದಾನೆ. ಆ ಕಾರ್ಯ ಮಾಡುವೆ” ಎಂದರು.
“ನಾನು ಯಾರ ಹೇಳಿಕೆ ಗಂಭೀರವಾಗಿ ಪರಿಗಣಿಸಲ್ಲ, ನೋವು ಮಾಡಿಕೊಳ್ಳಲ್ಲ. ಲೋಕಸಭಾ ಚುನಾವಣೆಯಲ್ಲಿ ಕೆಲವರನ್ನು ಪಕ್ಷದಿಂದ ಹೊರಹಾಕಿದ್ದೇವೆ. ಈಗಾಗಲೇ ಬಿಜೆಪಿ ಶುದ್ಧೀಕರಣ ಆಗಿದೆ” ಎಂದು ಕುಟುಕಿದರು.