Homeಕರ್ನಾಟಕಬಾಬಾಬುಡನ್ ಗಿರಿ ಗೋರಿ ದ್ವಂಸ ಪ್ರಕರಣ ರೀ ಓಪನ್ ಎಂಬುದು ಮಾಧ್ಯಮಗಳ ಸುಳ್ಳು ಸುದ್ದಿ: ಸಿದ್ದರಾಮಯ್ಯ

ಬಾಬಾಬುಡನ್ ಗಿರಿ ಗೋರಿ ದ್ವಂಸ ಪ್ರಕರಣ ರೀ ಓಪನ್ ಎಂಬುದು ಮಾಧ್ಯಮಗಳ ಸುಳ್ಳು ಸುದ್ದಿ: ಸಿದ್ದರಾಮಯ್ಯ

ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿ ಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಈ ಕುರಿತು ಎಕ್ಸ್‌ ತಾಣಲ್ಲಿ ಪೋಸ್ಟ್‌ ಮಾಡಿರುವ ಅವರು, “2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ. 2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು” ಎಂದಿದ್ದಾರೆ.

“2023 ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ. ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹನವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ” ಎಂದು ತಿಳಿಸಿದ್ದಾರೆ.

“ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಮತ್ತು ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ” ಎಂದು ತಿಳಿಸಿದ್ದಾರೆ.

ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು. ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments