Homeಕರ್ನಾಟಕಸಹಾಯಕ ಪ್ರಾಧ್ಯಾಪಕರ ನೇಮಕಾತಿ | ಎರಡು ವರ್ಷಗಳ ನಂತರ ಸರ್ಕಾರ ಆದೇಶ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ | ಎರಡು ವರ್ಷಗಳ ನಂತರ ಸರ್ಕಾರ ಆದೇಶ

ಸರಕಾರಿ ಪ್ರಥಮ ದರ್ಜೆಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ 26 ವಿಷಯಗಳ 1,242 ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, 1001 ಮಂದಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ರಾಜ್ಯ ಸರ್ಕಾರ ಶಿಕ್ಷಕರ ದಿನಾಚರಣೆಯ ದಿನವಾದ ಇಂದು ಗುರುವಾರ (ಸೆ.5) ಹೊರಡಿಸಿದೆ.

2021ರಲ್ಲಿ ನೇಮಕಾತಿಯು ಕೆಇಎ ಮೂಲಕ ಅಧಿಸೂಚನೆಯಾಗಿದ್ದು, ಅಂತಿಮ ಆಯ್ಕೆ ಪಟ್ಟಿಯನ್ನು 2023ರ ನವೆಂಬರ್ 4ರಂದು ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟವಾಗಿದ್ದರೂ ಕೂಡ ಇದುವರೆಗೂ ಸ್ಥಳನಿಯುಕ್ತಿ ಆದೇಶ ಪತ್ರ ನೀಡಿರಲಿಲ್ಲ.

ಕಳೆದ ಜೂನ್‌ನಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಪ್ರತಿಯ ವಿಳಂಬದಿಂದಾಗಿ ಕಂಗಾಲಾಗಿದ್ದ ಅಭ್ಯರ್ಥಿಗಳು ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆಯ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದ್ದರು.

ಎರಡು ವರ್ಷಗಳ ನಂತರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಆದೇಶವನ್ನು ಸರ್ಕಾರ ಹೊರಡಿಸಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳ ವೇತನ ಶ್ರೇಣಿ ರೂ.57,700- 1,82,400 (ಯುಜಿಸಿ ವೇತನ ಶ್ರೇಣಿ) ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿ ಸರ್ಕಾರ ಆದೇಶಿಸಿದೆ.

ಅಧಿಸೂಚನೆಯ ಪ್ರತಿಯನ್ನು ಅಭ್ಯರ್ಥಿಗಳ ಖಾಯಂ ವಿಳಾಸಕ್ಕೆ ಪ್ರತ್ಯೇಕವಾಗಿ ಅಂಚೆಯ ಮೂಲಕ ರವಾನಿಸಲು ಕಾಲೇಜು ಶಿಕ್ಷಣ ಇಲಾಖೆ ಕ್ರಮವಹಿಸಲಿದೆ. ಸದರಿ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳು ಈ ಆದೇಶ ತಲುಪಿದ 15 (ಹದಿನೈದು ದಿನಗಳೊಳಗೆ) ಆಯುಕ್ತರು ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಭವನ, 2ನೇ ಮಹಡಿ, ಅರಮನೆ ರಸ್ತೆ, ಬೆಂಗಳೂರು ಇವರಲ್ಲಿ ವರದಿ ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆಯವರು ನಿಯಮಾನುಸಾರ ಜೇಷ್ಠತೆಯ ಆಧಾರದ ಮೇಲೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ ಅಭ್ಯರ್ಥಿಗಳಿಗೆ ಸ್ಥಳನಿಯುಕ್ತಿ ಆದೇಶವನ್ನು ನೀಡಲದ್ದಾರೆ. ಅಭ್ಯರ್ಥಿಗಳು ಸ್ಥಳ ನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡ ದಿನಾಂಕದಿಂದ ವೇತನ ಹಾಗೂ ಇತರ ಭತ್ಯೆಗಳನ್ನು ಪಡೆಯಲು ಅರ್ಹರಿರುತ್ತಾರೆ.

ಸರ್ಕಾರದ ಪೂರ್ವಾನುಮತಿ ಪಡೆಯದೆ ನಿಗಧಿತ ಅವಧಿಯೊಳಗೆ ವರದಿ ಮಾಡಿಕೊಳ್ಳಲು ವಿಫಲರಾಗುವ ಅಭ್ಯರ್ಥಿಯ ನೇಮಕಾತಿ ಆದೇಶ ತಾನಾಗಿಯೇ ಅನೂರ್ಜಿತವಾಗಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments