Homeಕರ್ನಾಟಕಮೋದಿಗಾಗಿ ಮರಳಿ ಮಾತೃ ಪಕ್ಷ ಸೇರುತ್ತಿದ್ದೇನೆ: ಜಗದೀಶ್‌ ಶೆಟ್ಟರ್‌

ಮೋದಿಗಾಗಿ ಮರಳಿ ಮಾತೃ ಪಕ್ಷ ಸೇರುತ್ತಿದ್ದೇನೆ: ಜಗದೀಶ್‌ ಶೆಟ್ಟರ್‌

ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಲಿಂಗಾಯತ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ಮರಳಿ ಮಾತೃ ಪಕ್ಷ ಬಿಜೆಪಿಗೆ ಮರಳಿದ್ದಾರೆ.

ಗುರುವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಶೆಟ್ಟರ್‌ ಅವರು ದಿಢೀರ್‌ ಮಾತುಕತೆ ನಡೆಸಿದ್ದು, ಅದು ಈಗ ಯಶಸ್ವಿಯಾಗಿದೆ.

ದೆಹಲಿಯಲ್ಲಿ ಶೆಟ್ಟರ್‌ ಅವರು ಬಿ ಎಸ್‌ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಜಗದೀಶ್ ಶೆಟ್ಟರ್ ಅವರು ಬಿಜೆಪಿ ಹೈಕಮಾಂಡ್ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಸೇರ್ಪಡೆ ಆಗುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಶೆಟ್ಟರ್ ತಮ್ಮ ಆಪ್ತ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ‌ ಜೊತೆ ದೆಹಲಿ ತಲುಪಿದ್ದು, ಅಲ್ಲಿ ಬಿಜೆಪಿ ಸೇರ್ಪಡೆಗೆ ಅಂತಿಮ ತೀರ್ಮಾನ ಕೈಗೊಂಡಿದ್ದಾರೆ.

ದೆಹಲಿ ಕಚೇರಿಯಲ್ಲಿ ಸೇರ್ಪಡೆ

ಜಗದೀಶ್ ಶೆಟ್ಟರ್ ಅವರು ಬಿಜೆಪಿಯ ದೆಹಲಿ ಕಚೇರಿಲ್ಲಿ ಅಧಿಕೃತವಾಗಿ ಮಾತೃಪಕ್ಷಕ್ಕೆ ಮರಳಿದರು. ಈ ವೇಳೆ ಮಾತನಾಡಿದ ಅವರು, “ವಿಧಾನಸಭಾ ಚುನಾವಣೆ ವೇಳೆ ಕೆಲವು ಕಾರಣಗಳಿಗಾಗಿ ಬಿಜೆಪಿ ತೊರೆದಿದ್ದೆ. ಮತ್ತೆ ನಮ್ಮ ನಾಯಕರು ಮರಳಿ ಪಕ್ಷಕ್ಕೆ ಬಾ ಎಂದು ವಿನಂತಿಸಿಕೊಂಡರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮರಳಿ ಪಕ್ಷಕ್ಕೆ ಬಂದಿರುವೆ. ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು. ಹೀಗಾಗಿ ಪಕ್ಷಕ್ಕೆ ಮತ್ತೆ ದುಡಿಯುತ್ತೇನೆ” ಎಂದರು.

“ಕಾಂಗ್ರೆಸ್‌ ನಾಯಕಾರದ ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚೆನ್ನಾಗಿ ತಮ್ಮ ಪಕ್ಷದಲ್ಲಿ ನಡೆಸಿಕೊಂಡಿದ್ದಾರೆ. ಅವರಿಗೆ ಈ ಮೂಲಕ ಧನ್ಯವಾದ ತಿಳಿಸುತ್ತೇನೆ. ಅಮಿತ್‌ ಶಾ ಅವರು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಲೋಕಸಭೆಯಲ್ಲಿ ಮತ್ತೆ ಬಿಜೆಪಿ ಗೆಲ್ಲಬೇಕು” ಎಂದು ಹೇಳಿದರು.

“ಈಗಾಗಲೇ ಇ-ಮೇಲ್‌ ಮೂಲಕ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕಳುಹಿಸಿದ್ದೇನೆ. ಕಾಂಗ್ರೆಸ್‌ನ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದೇನೆ” ಎಂದರು.

ಪಕ್ಷಕ್ಕೆ ಹೆಚ್ಚಿನ ಶಕ್ತಿ: ವಿಜಯೇಂದ್ರ

ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ತಮ್ಮ ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿ ಮತ್ತೊಮ್ಮೆ ಬಿಜೆಪಿ ಸೇರಿದ್ದಾರೆ. ಅವರ ಮನೆಗೇ ಅವರು ಮರಳಿ ಬಂದಿದ್ದಾರೆ” ಎಂದರು.

“ರಾಜ್ಯ ಬಿಜೆಪಿ ಬೆಳವಣಿಗೆ ದೃಷ್ಟಿಯಿಂದ ಇದೊಂದು ದೊಡ್ಡ ಶಕ್ತಿ ಎಂದ ಅವರು, ಪಕ್ಷದ ಹಿರಿಯರು, ಕಾರ್ಯಕರ್ತರ ಅಪೇಕ್ಷೆ ಇದಾಗಿತ್ತು. ಈ ಕುರಿತು ಹಲವಾರು ದಿನಗಳಿಂದ ಚರ್ಚೆ ಆಗಿತ್ತು. ಇವತ್ತು ಬೆಳಿಗ್ಗೆ ಬಿಜೆಪಿ ವರಿಷ್ಠರಾದ, ಮಾನ್ಯ ಗೃಹ ಸಚಿವ ಅಮಿತ್ ಶಾ ಅವರನ್ನು ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತಿತರ ಹಿರಿಯರೊಂದಿಗೆ ಭೇಟಿ ಮಾಡಿ, ಚರ್ಚಿಸಿ ಯಾವುದೇ ಅಪೇಕ್ಷೆ ಇಲ್ಲದೆ ಬಿಜೆಪಿ ಸೇರಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಯ ಅಧ್ಯಕ್ಷ ನಡ್ಡಾಜೀ, ಅಮಿತ್ ಶಾಜೀ, ರಾಜ್ಯದ ಕಾರ್ಯಕರ್ತರು ಅವರ ಮರಳುವಿಕೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments