Homeಕರ್ನಾಟಕಧಾರ್ಮಿಕ ಆಚರಣೆ, ನಂಬಿಕೆ ವ್ಯಕ್ತಿಗತ ವಿಚಾರ, ಆದರೆ ಬಿಜೆಪಿ ಇಲ್ಲಿಯೇ ರಾಜಕೀಯ ಹುಡುಕುತ್ತದೆ: ಡಿ ಕೆ...

ಧಾರ್ಮಿಕ ಆಚರಣೆ, ನಂಬಿಕೆ ವ್ಯಕ್ತಿಗತ ವಿಚಾರ, ಆದರೆ ಬಿಜೆಪಿ ಇಲ್ಲಿಯೇ ರಾಜಕೀಯ ಹುಡುಕುತ್ತದೆ: ಡಿ ಕೆ ಶಿವಕುಮಾರ್

ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆಗೆ ತೆಗೆದುಕೊಂಡರು.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಉತ್ತರಿಸಿ, “ಬಿಜೆಪಿಯವರ ವಿಚಾರಗಳನ್ನು ಅನವಶ್ಯಕವಾಗಿ ಎಳೆದಾಡಲು ನಾನು ಹೋಗುವುದಿಲ್ಲ. ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ” ಎಂದು ಹೇಳಿದರು.

“ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments