ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 4ನೇ ಆರೋಪಿ, ದರ್ಶನ್ ತೂಗುದೀಪ ಸೇನಾ ಅಧ್ಯಕ್ಷ ರಾಘವೇಂದ್ರನ ತಾಯಿ ಮಂಜುಳಮ್ಮ (70) ಅನಾರೋಗ್ಯದಿಂದ ಶನಿವಾರ ನಿಧನರಾದರು.
ಮಗ ಜೈಲು ಸೇರಿದ ನಂತರ ಮಂಜುಳಮ್ಮ ಹಾಸಿಗೆ ಹಿಡಿದಿದ್ದರು. ಅವರಿಗೆ ರಾಘವೇಂದ್ರ ಸೇರಿ ಇಬ್ಬರು ಪುತ್ರರು, ಪುತ್ರಿ ಇದ್ದಾರೆ.
ಶನಿವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದ್ದು ರಾಘವೇಂದ್ರನನ್ನು ಕರೆಸುವಂತೆ ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆಯಾದ ನಂತರ 8ನೇ ಆರೋಪಿ ಅನುಕುಮಾರ್ ತಂದೆ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದರು.