Homeಕರ್ನಾಟಕಗಣರಾಜ್ಯೋತ್ಸವ | ಕೈಗಾರಿಕೆ, ಕೃಷಿ ಆಧಾರಿತ ಉದ್ದಿಮೆ, ಪ್ರವಾಸೋದ್ಯಮಕ್ಕೆ ಒತ್ತು: ಎಂ ಬಿ ಪಾಟೀಲ್

ಗಣರಾಜ್ಯೋತ್ಸವ | ಕೈಗಾರಿಕೆ, ಕೃಷಿ ಆಧಾರಿತ ಉದ್ದಿಮೆ, ಪ್ರವಾಸೋದ್ಯಮಕ್ಕೆ ಒತ್ತು: ಎಂ ಬಿ ಪಾಟೀಲ್

ನಮ್ಮ ಗಣತಂತ್ರ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಾನ ಅವಕಾಶಗಳನ್ನು ಲಭ್ಯವಾಗಿಸುವ ಗುರಿಯೊಂದಿಗೆ ಜಿಲ್ಲೆಯಲ್ಲಿ ಕೈಗಾರಿಕೆ, ಕೃಷಿ ಆಧಾರಿತ ಉದ್ದಿಮೆ, ಪ್ರವಾಸೋದ್ಯಮ ಒಳಗೊಂಡಂತೆ ಸಮಗ್ರ ಅಭಿವೃದ್ಧಿಗೆ ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಶುಕ್ರವಾರ ಹೇಳಿದರು.

ವಿಜಯಪುರ ಜಿಲ್ಲಾಡಳಿತದಿಂದ ಇಲ್ಲಿನ ಡಾ.ಬಿ.ಆ‌ರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

“ಇಲ್ಲಿನ ಪಾರಂಪರಿಕ ಸ್ಥಳಗಳ ಮಹತ್ವ ಗಮನದಲ್ಲಿರಿಸಿಕೊಂಡು ಜಿಲ್ಲೆಯನ್ನು ಪ್ರವಾಸಿತಾಣವಾಗಿ ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗುವುದು. ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ತೆಲಂಗಾಣ ಮಾದರಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ/ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು” ಎಂದರು.

“ಐತಿಹಾಸಿಕ ಕೋಟೆ ಗೋಡೆಗಳು ಹಾಗೂ ಸುತ್ತಲಿನ ಸ್ಥಳಗಳ ಅಭಿವೃದ್ಧಿಪಡಿಸುವ ಜೊತೆಗೆ ಕಾರ್ಯಾರಂಭವಾಗಲಿರುವ ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ಲಭ್ಯವಾಗಿಸುವ ಬಗ್ಗೆ ಕ್ರಮ ವಹಿಸಲಾಗುವುದು” ಎಂದು ವಿವರಿಸಿದರು.

“ನಗರ ಸಂಚಾರ ದಟ್ಟಣೆ ತಪ್ಪಿಸಲು ಗಾಂಧಿ ಚೌಕಿಯಲ್ಲಿ ಪ್ರೈ ಓವರ್ ನಿರ್ಮಾಣ, ಸೈಕ್ಲಿಂಗ್ ವೆಲೋಡೋಮ್ ಹಾಗೂ ಸೈಕ್ಲಿಂಗ್ ಹಾಸ್ಟೇಲ್ ಉನ್ನತೀಕರಣ. ಜಿಲ್ಲಾ ಕೇಂದ್ರದಲ್ಲಿ ವಿಮಾನಯಾನ ತರಬೇತಿ ಸಂಸ್ಥೆ ಪ್ರಾರಂಭಿಸಲು ಯೋಜನೆ ಕಾರ್ಯಗತಗೊಳಿಸಲು ಗಮನ ಕೇಂದ್ರೀಕರಿಸಲಾಗುತ್ತದೆ” ಎಂದು ತಿಳಿಸಿದರು.

“ಸಾರ್ವಜನಿಕ ಶಾಲಾ ಶಿಕ್ಷಣ ಗುಣಮಟ್ಟ ಹೆಚ್ಚಿಸುವುದು, ಖಾಸಗಿ ಸಹಯೋಗದಲ್ಲಿ ಉತ್ಕೃಷ್ಟ ದರ್ಜೆಯ ಬಿಸಿಯೂಟ ಒದಗಿಸುವುದು. ವಿಜಯಪುರ ನಗರ ಹಾಗೂ ಪಟ್ಟಣಗಳಲ್ಲಿ ಅತ್ಯುತ್ತಮ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳ ಆಧುನೀಕರಣ, ಗ್ರಾಮೀಣ ವೈದ್ಯಕೀಯ ಸೇವೆಗೆ ಒತ್ತು. ಆಯುಷ್ ಪದ್ಧತಿ, ನಿಸರ್ಗ ಚಿಕಿತ್ಸೆಗೆ ಪ್ರೋತ್ಸಾಹ ಜನರ ಗುಣಮಟ್ಟದ ಬದುಕುಗೆ ಒತ್ತಾಸೆಯಾಗುವಂತೆ ಮಾಡಲಾಗುವುದು” ಎಂದು ಪಾಟೀಲ್ ವಿವರಿಸಿದರು.

“ನಗರ ಹಾಗೂ ಪಟ್ಟಣಗಳಲ್ಲಿ ಉಚಿತ ವೈಫೈ ವ್ಯವಸ್ಥೆ, ಕ್ರೀಡೆಗೆ ಉತ್ತೇಜನ,‌ ಸಮುದಾಯ ರೇಡಿಯೋ ಕೇಂದ್ರಗಳ ಸ್ಥಾಪನೆ, ಮೀನುಗಾರಿಕೆ ಕಾಲೇಜು ಹಾಗೂ ಬೃಹತ್ ಮೀನು ಸಂಗ್ರಹಾಲಯ ಪ್ರಾರಂಭ ಆದ್ಯತೆಗಳ ಪಟ್ಟಿಯಲ್ಲಿದೆ” ಎಂದು ಗಮನ ಸೆಳೆದರು.

ಸಿದ್ದೇಶ್ವರ ಶ್ರೀಗಳ ಪರಿಸರ-ಪ್ರಕೃತಿ ಪ್ರೀತಿಯ ಹೆಗ್ಗುರುತಾಗಿ ಅವರ ನೆನಪಿನಲ್ಲಿ ವಿಜಯಪುರ, ಮಮದಾಪುರ ಅಥವಾ ಬಾಬಾನಗರದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ಬೆಳಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅಲ್ಲಿಯೇ ವಿಜ್ಞಾನ ಸಂಶೋಧನಾ ಕೇಂದ್ರ ಆರಂಭಿಸುವ ಉದ್ದೇಶ ಇದೆ” ಎಂದು ಹೇಳಿದರು.

ಸಂಸದ ರಮೇಶ ಜಿಗಜಿಣಗಿ, ಮೇಯರ್ ಮಹೆಜಬೀನ್ ಹೊರ್ತಿ, ಉಪ ಮೇಯರ್ ದಿನೇಶ್ ಹಳ್ಳಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯ್ತಿ ಸಿಇಒ ರಿಷಿ ಆನಂದ್‌ ಇದ್ದರು.‌

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments