ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ಮೇಲೆ ಮಗಳ ಚುನಾಚಣೆಗಾಗಿ ಸಕ್ಕರೆ ಕಾರ್ಖಾನೆಗಳಿಂದ ಹಣ ಕೇಳಿರುವ ಆರೋಪ ಮಾಡಿದ್ದು, ಅದನ್ನು ಅವರು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂದು ಸಚಿವ ಶಿವಾನಂದ ಪಾಟೀಲ್ ಸವಾಲು ಹಾಕಿದ್ದಾರೆ.
ಬಾಗಲಕೋಟೆಯಲ್ಲಿ ಶನಿವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಹಣ ಕೇಳಿರುವುದನ್ನು ಅವರು ಸಾಬೀತು ಮಾಡಬೇಕು. ಇಲ್ಲವೇ ಅವರು ರಾಜಕೀಯದಿಂದ ನಿವೃತ್ತರಾಗಬೇಕು” ಎಂದು ಹೇಳಿದರು.
“ಗಂಡಸ್ಸಾಗಿದ್ದರೆ ಯತ್ನಾಳ್ ಅವರು ವಿಜಯಪುರ ನಗರದಿಂದ ಪಕ್ಷೇತರರಾಗಿ ನಿಲ್ಲಲಿ. ನಾನೂ ಪಕ್ಷೇತರನಾಗಿ ನಿಲ್ಲುತ್ತೇನೆ. ನನಗಿಂತ ಅವರು ಒಂದು ಮತ ಹೆಚ್ಚಿಗೆ ಪಡೆದರೂ ರಾಜಕೀಯ ನಿವೃತ್ತಿ ಪಡೆಯುವೆ. ಇಲ್ಲದಿದ್ದರೆ, ಅವರು ನಿವೃತ್ತರಾಗಲಿ” ಎಂದು ಸವಾಲು ಹಾಕಿದರು.
“ಬೇರೆಯವರ ತರ ಚಿಲ್ಲರೆ ರಾಜಕಾರಣ ಮಾಡಲು ನನಗೆ ಬರುವುದಿಲ್ಲ. ಬಿಜೆಪಿ ಅನ್ನು ಹೆಚ್ಚು ಬೈದವರು ಯಾರಾದರೂ ಇದ್ದರೆ, ಅದು ಯತ್ನಾಳ್” ಎಂದು ಟೀಕಿಸಿದರು.