Homeಕರ್ನಾಟಕಮೋದಿ ಕೊಟ್ಟ ಚೊಂಬನ್ನು ಶ್ರೀರಾಮುಲು ಕೈಗೆ ವಾಪಸ್‌ ಕೊಡಿ: ಸಿಎಂ ಸಿದ್ದರಾಮಯ್ಯ ಕರೆ

ಮೋದಿ ಕೊಟ್ಟ ಚೊಂಬನ್ನು ಶ್ರೀರಾಮುಲು ಕೈಗೆ ವಾಪಸ್‌ ಕೊಡಿ: ಸಿಎಂ ಸಿದ್ದರಾಮಯ್ಯ ಕರೆ

ಮೋದಿ ಮತ್ತು ಶ್ರೀರಾಮುಲು ಬಳ್ಳಾರಿ ಜನಕ್ಕೆ ಕೊಟ್ಟ ಚೊಂಬನ್ನು ನೀವು ಶ್ರೀರಾಮುಲು ಕೈಗೆ ಚುನಾವಣೆಯಲ್ಲಿ ವಾಪಾಸ್ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರ ಗೆಲುವಿನ ಸಂದೇಶ ನೀಡಲು ಕೂಡ್ಲಿಗಿಯಲ್ಲಿ ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

“ತಾವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಮೋದಿಯವರಿಗೆ ಖಚಿತವಾಗಿದೆ. ಆಕ್ಸಿಸ್ ಪ್ರಕಟಿಸಿದ ಖಚಿತವಾದ ಸಮೀಕ್ಷೆಗಳನ್ನು ಮೋದಿ ಡಿಲೀಟ್ ಮಾಡಿಸುತ್ತಿರುವುದಕ್ಕೆ ಸೋಲಿನ ಭಯವೇ ಕಾರಣ.‌ ಸೋಲು ಖಚಿತವಾಗುತ್ತಿದ್ದಂತೆ ಹೆಚ್ಚೆಚ್ಚು ಸುಳ್ಳುಗಳನ್ನು ಸೃಷ್ಟಿಸಿ ಭಾರತೀಯರ ನಡುವೆ ಬಿರುಕು ಮೂಡಿಸುತ್ತಾರೆ. ಜಾಗ್ರತೆ ವಹಿಸಿ” ಎಂದು ಎಚ್ಚರಿಕೆ ನೀಡಿದರು.

“ಬಿಜೆಪಿ 200 ಸ್ಥಾನ ಗೆದ್ದರೆ ಹೆಚ್ಚು ಎನ್ನುವ ಸಮೀಕ್ಷೆಗಳು ಬಂದಿವೆ. ಮೋದಿ ಮಾಮೂಲಾಗಿಯೇ ಹಸಿ ಹಸಿ ಸುಳ್ಳು ಹೇಳುತ್ತಾರೆ. ಈಗ ಇವರ ಸೋಲಿನ ಖಚಿತ ಸಮೀಕ್ಷೆಗಳು ಬರುತ್ತಿದ್ದಂತೆ ಭಯಾನಕವಾದ ಸುಳ್ಳುಗಳನ್ನು ಸೃಷ್ಟಿಸಿ ಹೋದಲ್ಲಿ ಬಂದಲ್ಲಿ ಸುಳ್ಳು ಹಂಚುತ್ತಾ ಅಡ್ಡಾಡುತ್ತಾರೆ. ಇವರ ಸುಳ್ಳುಗಳಿಗೆ ಭಾರತೀಯರು ಮತ್ತೆ ಮತ್ತೆ ತಲೆ ಒತ್ತೆ ಇಡುವುದಿಲ್ಲ” ಎಂದರು.

ಮೀಸಲಾತಿ ವಿಷಯ ಪ್ರಸ್ತಾಪಿಸಿ ಹಿಂದುಳಿದವರನ್ನು ಮುಸ್ಮಿಮರ ವಿರುದ್ಧ ಎತ್ತಿಕಟ್ಟುವ ಮೋದಿ ಸ್ಕೆಚ್ ವಿಫಲಗೊಳಿಸಿ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮಹಿಳೆಯರ ಖಾತೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಬಂದು ಬೀಳತ್ತೆ. ನಿರುದ್ಯೋಗಿಗಳ ಖಾತೆಗೂ ಒಂದು ಲಕ್ಷ ರೂಪಾಯಿ ಜಮೆ ಆಗ್ತದೆ. ಇಡಿ ದೇಶದ ರೈತರ ಸಾಲ ಮನ್ನಾ ಆಗುತ್ತದೆ” ಎಂದು ಭರವಸೆ ನೀಡಿದರು.

“ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಈ.ತುಕಾರಾಂ ಗೆಲ್ಲಲೇಬೇಕು. ಶ್ರೀರಾಮುಲು ಸೋಲಲೇಬೇಕು. ಇದು ನಮ್ಮ ಸ್ಪಷ್ಟ ತೀರ್ಮಾನ. ನಮ್ಮ ತೀರ್ಮಾನಕ್ಕೆ ಮತ್ತು ಈ.ತುಕಾರಾಂ ಅವರಿಗೆ ಆಶೀರ್ವದಿಸಿ” ಎಂದು ಮನವಿ ಮಾಡಿದರು.

ಮೋಹನ್ ಭಾಗವತ್ ಭಯಾನಕ ಸುಳ್ಳು ಹೇಳಿದ್ದಾರೆ

“ತಾವು ಮೀಸಲಾತಿಗೆ ವಿರುದ್ಧವಿಲ್ಲ ಎಂದು ಸಂಘ ಪರಿವಾರದ ಮೋಹನ್ ಭಾಗವತ್ ಹೇಳಿರುವುದು ಹಸೀ ಸುಳ್ಳು. ಮೀಸಲಾತಿ ವಿರೋಧಿಸಿ ರಾಜ್ಯ ಸಭಾ ಸದಸ್ಯ, ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಾಮಾ ಜೋಯಿಸ್ ಕೋರ್ಟ್ ಮೆಟ್ಟಿಲೇರಿದ್ದು ದೇಶದ ಹಿಂದುಳಿದ ಸಮುದಾಯಗಳು ಮರೆತಿಲ್ಲ. ಮಂಡಲ್ ವರದಿಗೆ ವಿರೋಧ ಮಾಡಿ ಹಿಂದುಳಿದ ಜಾತಿ-ಸಮುದಾಯಗಳ ಮಕ್ಕಳನ್ನು ಆತ್ಮಹತ್ಯೆಗೆ ತಳ್ಳಿದ್ದು ಇದೇ ಬಿಜೆಪಿ. ಇಂತಹ ಹಲವು ಉದಾಹರಣೆಗಳನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಬಿಜೆಪಿ ಪರಿವಾರ ಹುಟ್ಟಿನಿಂದಲೇ ಮೀಸಲಾತಿ ವಿರೋಧಿಗಳು. ಆದರೆ ಸುಳ್ಳುಗಳ ಮೂಲಕ ಹಿಂದುಳಿದವರನ್ನು ಪದೇ ಪದೇ ವಂಚಿಸುವುದು ಇವರಿಗೆ ರೂಢಿಯಾಗಿದೆ. ಈ ಬಗ್ಗೆ ಎಚ್ಚರದಿಂದಿರಿ” ಎಂದು ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಜಮೀರ್ ಅಹಮದ್, ರಾಮಲಿಂಗಾರೆಡ್ಡಿ ಸೇರಿ ವಿಜಯನಗರ, ಬಳ್ಳಾರಿ ಜಿಲ್ಲೆಯ ಶಾಸಕರುಗಳು, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಬ್ಲಾಕ್ ಮುಖಂಡರುಗಳು ಉಪಸ್ಥಿತರಿದ್ದು ಈ.ತುಕಾರಾಂ ಅವರ ಗೆಲುವಿಗೆ ಶಪಥ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments