Homeದೇಶರಸ್ತೆ ಅಪಘಾತ: ತೆಲಂಗಾಣದ ಬಿಆರ್​ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ ದಾರುಣ ಸಾವು

ರಸ್ತೆ ಅಪಘಾತ: ತೆಲಂಗಾಣದ ಬಿಆರ್​ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ ದಾರುಣ ಸಾವು

ತೆಲಂಗಾಣದ ಬಿಆರ್​ಎಸ್ (ಭಾರತ್ ರಾಷ್ಟ್ರ ಸಮಿತಿ)​ ಪಕ್ಷದ ಶಾಸಕಿ ಲಾಸ್ಯ ನಂದಿತಾ (36) ಅವರು ರಸ್ತೆ ಅಪಘಾತದಲ್ಲಿ ಶುಕ್ರವಾರ ದಾರುಣವಾಗಿ ಮೃತಪಟ್ಟಿದ್ದಾರೆ.

ಹೈದರಾಬಾದ್‌ನ ಔಟರ್‌ ರಿಂಗ್‌ ರೋಡ್‌ನಲ್ಲಿ ನಂದಿತಾ ಪ್ರಯಾಣಿಸುತ್ತಿದ್ದ ಕಾರು ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಕಾರು ಅತಿವೇಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ ಲಾಸ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾಸ್ಯ ನಂದಿತಾ ಅವರು ಸಿಕಂದರಾಬಾದ್ ಕಂಟೋನ್ಸೆಂಟ್ (ಪ.ಜಾತಿ) ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದರು. ಇತ್ತೀಚೆಗಷ್ಟೇ ರಸ್ತೆ ಅಪಘಾತದಲ್ಲಿ ಸ್ವಲ್ಪದರಲ್ಲೇ ಬಚಾವಾಗಿದ್ದ ಶಾಸಕಿ ಲಾಸ್ಯ ನಂದಿತಾ ಅವರನ್ನು ಸಾಲು ಸಾಲು ಅವಘಡಗಳು ಕಾಡಿವೆ.

ಇತ್ತೀಚೆಗಷ್ಟೇ ಶಾಸಕಿ ಬಿಆರ್‌ಎಸ್ ನಲ್ಗೊಂಡ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಬಳಿಕ ಮನೆಗೆ ಮರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಆ ವೇಳೆ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದರು. ಕಳೆದ ತಿಂಗಳು ಲಿಫ್ಟ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದು ಭಾರಿ ಸುದ್ದಿಯಾಗಿತ್ತು. ಹತ್ತು ದಿನಗಳ ಹಿಂದೆ ಲಾಸ್ಯ ನಂದಿತಾ ಅವರ ಇನ್ನೋವಾ ಕಾರು ಅಪಘಾತಕ್ಕೀಡಾಗಿತ್ತು.

ಶಾಸಕಿ ಲಾಸ್ಯ ನಂದಿತಾ ನಿಧನಕ್ಕೆ ಬಿಆರ್‌ಎಸ್ ನಾಯಕರು ಕಂಬನಿ ಮಿಡಿದಿದ್ದಾರೆ. ಸ್ವಲ್ಪ ಸಮಯದ ನಂತರ, ಮೃತದೇಹವನ್ನು ಚಿಕ್ಕಡಪಲ್ಲಿಯಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತದೆ.

ಕಳೆದ ವರ್ಷ ಇದೇ ತಿಂಗಳಲ್ಲಿ ಶಾಸಕಿಯ ತಂದೆ ಸಾಯಣ್ಣ ಮೃತಪಟ್ಟಿದ್ದರು. ಸಾಯಣ್ಣ 2023 ರ ಫೆಬ್ರವರಿ 19ರಂದು ನಿಧನರಾಗಿದ್ದರು. ಇದೀಗ ಅವರ ಮಗಳು 2024 ರ ಫೆಬ್ರವರಿ 23 ರಂದು ನಿಧನರಾಗಿದ್ದಾರೆ. ಇದು ಕುಟುಂಬದವರನ್ನು ತೀವ್ರ ಆಘಾತಕ್ಕೀಡು ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments