Homeಕರ್ನಾಟಕಮೆಕ್ಕೆಜೋಳ ಬೆಳೆದ ರೈತರಿಗೆ 250 ರೂ. ಪ್ರೋತ್ಸಾಹ ಧನ ನೇರವಾಗಿ ರೈತರ ಖಾತೆಗೆ ಜಮೆ ಮಾಡಿ:...

ಮೆಕ್ಕೆಜೋಳ ಬೆಳೆದ ರೈತರಿಗೆ 250 ರೂ. ಪ್ರೋತ್ಸಾಹ ಧನ ನೇರವಾಗಿ ರೈತರ ಖಾತೆಗೆ ಜಮೆ ಮಾಡಿ: ಬಸವರಾಜ ಬೊಮ್ಮಾಯಿ

ಮೆಕ್ಕೆಜೋಳ ಬೆಳೆದ ರೈತರಿಗೆ 250 ರೂ. ಪ್ರೋತ್ಸಾಹ ಧನ ನೇರವಾಗಿ ರೈತರ ಖಾತೆಗೆ ಜಮೆ ಮಾಡಿ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆದ ಎಲ್ಲ ರೈತರಿಗೆ ಘೋಷಣೆ ಮಾಡಿರುವ 250 ರೂ. ಪ್ರೋತ್ಸಾಹ ಧನವನ್ನು ಏಜೆಂಟರ ಹಾವಳಿ ತಪ್ಪಿಸಿ ನೇರವಾಗಿ ರೈತರ ಖಾತೆಗೆ ಜಮೆಯಾಗುವಂತೆ ನೋಡಿಕೊಳ್ಳಬೇಕು. ಒಂದು ವಾರದಲ್ಲಿ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ‌.

ಇಂದು ಗದಗನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸುವ ಹಾಗೂ ಖರೀದಿ ಕೇಂದ್ರದಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸುವ ಸಲುವಾಗಿ ಜಿಲ್ಲಾಧಿಕಾರಿಗಳು ಹಾಗೂ ರೈತ ಮುಖಂಡರುಗಳ ಸಭೆಯನ್ನು ನಡೆಸಿ ಮಾತನಾಡಿದರು.

ಕಳೆದ ವರ್ಷ ಮೆಕ್ಕೆಜೋಳಕ್ಕೆ ಎರಡು ಸಾವಿರ ರೂ. ಮೇಲೆ ದರ ಸಿಗುತ್ತಿತ್ತು. ಈ ವರ್ಷ ದರ ಸಂಪೂರ್ಣ ಕುಸಿದಿದೆ. ರೈತರು ಬಹಳ ಸಂಕಷ್ಟದಲ್ಲಿ ಸಿಕ್ಕಾಕ್ಕಿಕೊಂಡಿದ್ದಾರೆ. ಗದಗ ಜಿಲ್ಲೆಯ ರೈತರು ವಿಶೇಷವಾಗಿ ಲಕ್ಷ್ಮೇಶ್ವರದಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು. ಅಲ್ಲಿಗೆ ಜಿಲ್ಲಾಧಿಕಾರಿ ಬಂದು ಸರ್ಕಾರಕ್ಕೆ ಎಲ್ಲ ಮಾಹಿತಿ ನೀಡಿದ್ದಾರೆ. ಸರ್ಕಾರ ಮೊದಲು 10 ಲಕ್ಷ ಮೆಟ್ರಿಕ್ ಟನ್ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಸುಮಾರು ಒಂದೂವರಿ ತಿಂಗಳಿಂದ ಯಾವುದೇ ಖರೀದಿ ಪ್ರಕ್ರಿಯೆ ನಡೆದಿಲ್ಲ. ಈಗ ಖರೀದಿ ಬಹಳ ಮಂದಗತಿಯಲ್ಲಿ ನಡೆಯುತ್ತಿದೆ. ಇದುವರೆಗೂ ಒಂದು ಲಕ್ಷ ಟನ್ ಕೂಡ ಖರಿದಿಯಾಗಿಲ್ಲ. ಖರಿದಿ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆ ಇಲ್ಲ ಎಂದು ಹೇಳಿದರು.

ರಾಜ್ಯದ ರೈತರು ಯಾರು ಖರಿದಿ ಕೇಂದ್ರಕ್ಕೆ ಮೆಕ್ಕೆಜೋಳ ತರುತ್ತಾರೆ ಅದನ್ನು ಖರಿದಿಸಬೇಕು. ರೈತರ ಸಂಕಷ್ಟ ನೀಗಿಸುವ ಯಾವುದು ಕ್ರಮ ಕಾಣಿಸುತ್ತಿಲ್ಲ. ಈಗ ರೈತರಿಗೆ 250 ರೂ. ಕೊಡುವ ಹೊಸ ಸ್ಕಿಮ್ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ನಾವು ತೆಗೆದುಕೊಂಡು ಹೋಗಿರುವ ಮೆಕ್ಕೆಜೋಳದ ಪರಿಸ್ಥಿತಿ ಏನು? ಯಾರು ಖರೀದಿ ಕೇಂದ್ರಕ್ಕೆ ಮೆಕ್ಕೆಜೋಳ ತೆಗೆದುಕೊಂಡು ಹೋಗಿದ್ದಾರೆ. ಅದನ್ನು ಖರೀದಿ ಮಾಡಬೇಕು. ಮೆಕ್ಕೆಜೋಳ ಖರಿದಿಯಾಗದಿರುವ ರೈತರಿಗೆ 250 ರೂ. ಪ್ರೋತ್ಸಾಹ ಧನವನ್ನು ಯಾವ ರೀತಿ ಪರಿಹಾರ ನೀಡುತ್ತಾರೆ ಎನ್ನುವುದನ್ನು ತಿಳಿಸಬೇಕು ಎಂದು ಆಗ್ರಹಿಸಿದರು.

ಏಜೆಂಟರ ಹಾವಳಿ ತಪ್ಪಿಸಿ

ಖರೀದಿ ಕೇಂದ್ರಕ್ಕೆ ತರುವ ಮೆಕ್ಕೆಜೋಳವನ್ನು ಒಂದು ವಾರದಲ್ಲಿ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಈಗಾಗಲೇ ಸಮಯ ಬಹಳ ಆಗಿದೆ. ಸರ್ಕಾರ ಘೋಷಣೆ ಮಾಡಿರುವ ಹೊಸ ಯೋಜನೆಯಲ್ಲಿ ಅವ್ಯವಹಾರ ಆಗುವ ಆತಂಕ ಇದೆ. ಹಿಂದೆ ಹುಬ್ಬಳ್ಳಿಯಲ್ಲಿ ಈರುಳ್ಳಿ ಖರೀದಿ ಸಂದರ್ಭದಲ್ಲಿ ಅವ್ಯವಹಾರ ಆಗಿತ್ತು. ಗೋವಿನ ಜೋಳ ಖರಿದಿ ಸಂದರ್ಭದಲ್ಲಿಯೂ ಆಗಿತ್ತು. ಸರ್ಕಾರದ ಯೋಜನೆಯ ದುರ್ಲಾಭ ಪಡೆದುಕೊಳ್ಳುವವರು ಇರುತ್ತಾರೆ.‌ ಈ ಬಗ್ಗೆ ಎಚ್ಚರ ವಹಿಸಬೇಕು. ಈಗಾಗಲೇ ಏಜೆಂಟರು ಹುಟ್ಟಿಕೊಂಡಿರುತ್ತಾರೆ. ಅವರಿಗೆ ತಲುಪದೇ ನೇರವಾಗಿ ರೈತರಿಗೆ ತಲುಪುವ ರೀತಿಯಲ್ಲಿ ನೋಡಿಕೊಳ್ಳಬೇಕು. ನಿಜವಾದ ರೈತರ ಸಂಪೂರ್ಣ ಮಾಹಿತಿ ಪಡೆದು ಆವರು ಮಾರಿರುವ ಮೆಕ್ಕೆ ಜೋಳದ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಬೇಕು. ಇದರಲ್ಲಿ ಯಾವುದೇ ರೀತಿಯ ತಾರತಮ್ಯ, ಪಕ್ಷಪಾತ, ರಾಜಕಾರಣ ತರಬಾರದು. ಮೆಕ್ಕೆ ಜೋಳ ಬೆಳೆದ ರಾಜ್ಯದ ಎಲ್ಲ ರೈತರಿಗೂ ಇದರ ಸದುಪಯೋಗ ಆಗಬೇಕು. ಇಲ್ಲದಿದ್ದರೆ ರೈತರಿಗೆ ಹಣವೂ ಬರುವುದಿಲ್ಲ ಸರ್ಕಾರಕ್ಕೆ ಕೆಟ್ಟ ಹೆಸರೂ ಬರುತ್ತದೆ. ಆ ರೀತಿ ಆಗದಂತೆ ಎಚ್ಚರಿಕೆ ವಹಿಸಬೇಕು. ಒಂದು ವಾರದಲ್ಲಿ ಸಂಪೂರ್ಣ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಈ ಸಂಧರ್ಭದಲ್ಲಿ ಶಾಸಕರುಗಳಾದ ಸಿ.ಸಿ ಪಾಟೀಲ್, ಡಾ ಚಂದ್ರು ಲಮಾಣಿ, ವಿಧಾನ ಪರಿಷತ್ತ ಸದಸ್ಯರಾದ ಎಸ್.ವಿ ಸಂಕನೂರ, ಜಿಲ್ಲಾಧಿಕಾರಿಗಳಾದ ಸಿ.ಎನ್ ಶ್ರೀಧರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ರೋಹನ್ ಜಗದೀಶ, ಸೇರಿದಂತೆ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments