Homeಕರ್ನಾಟಕಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಿರಿ; ಸಿಎಂಗೆ ವಿಜಯೇಂದ್ರ ಆಗ್ರಹ

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಿರಿ; ಸಿಎಂಗೆ ವಿಜಯೇಂದ್ರ ಆಗ್ರಹ

ಬಿಜೆಪಿ ಕಾರ್ಯಕರ್ತ ಮಣಿಕಂಠ ರಾಠೋಡ್ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾರಣಾಂತಿಕ ಹಲ್ಲೆ ಮಾಡಿಸಿದ್ದು, ಕೂಡಲೇ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.

ಮೈಸೂರು ಪ್ರವಾಸದಲ್ಲಿರುವ ಅವರು ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ” ಪ್ರಿಯಾಂಕ್, ಮಧ್ಯರಾತ್ರಿ ರಾಠೋಡ್ ಮೇಲೆ ರಾಜಕೀಯ ಪುಡಾರಿಗಳ ಮೂಲಕ ಹಲ್ಲೆ ಮಾಡಿಸಿದ್ದಾರೆ. ಪ್ರಿಯಾಂಕ್ ಖರ್ಗೆಯವರು ಶಾಶ್ವತ ಅಧಿಕಾರದ ಭ್ರಮೆಯಲ್ಲಿದ್ದಾರೆ. ಅವರ ಸ್ವಕ್ಷೇತ್ರ, ಗುಲ್ಬರ್ಗ ಜಿಲ್ಲೆ, ಕಲ್ಯಾಣ ಕರ್ನಾಟಕದ ಘಟನೆಗಳನ್ನು ನೋಡಿದರೆ ಗೂಂಡಾಗಿರಿಗೂ ಇವರಿಗೂ ಏನೂ ವ್ಯತ್ಯಾಸ ಇಲ್ಲ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

“ಸಿಎಂ ಜನತೆಗೆ ಯಾವ ಸಂದೇಶ ನೀಡುತ್ತಿದ್ದಾರೆ? ಕೋಲಿ ಸಮಾಜದ ಯುವಕ ಆತ್ಮಹತ್ಯೆ ಮಾಡಿಕೊಂಡಾಗ ಎಫ್‍ಐಆರ್ ಮಾಡಲು ಮೀನಮೇಷ ಎಣಿಸುತ್ತಾರೆ. ಎಫ್‍ಐಆರ್‌ನಲ್ಲಿ ಬೇನಾಮಿ ಹೆಸರುಗಳನ್ನು ಸೇರಿಸಿದ್ದಾರೆ ಎಂದು ಆಕ್ಷೇಪಿಸಿದರು. ಒಟ್ಟಾರೆಯಾಗಿ ರೈತರ ವಿಚಾರದಲ್ಲಿ ರಾಜ್ಯ ಸರಕಾರದ ನಡವಳಿಕೆ, ದಲಿತ ವಿರೋಧಿ ಕಾರ್ಯವೈಖರಿ ಖಂಡನೀಯ” ಎಂದರು.

“ಮುಂದಿನ ಲೋಕಸಭಾ ಚುನಾವಣೆ ಮತ್ತು ಇತರ ಎಲ್ಲ ಚುನಾವಣೆಗಳನ್ನು ಬಿಜೆಪಿಯ ಎಲ್ಲ ಹಿರಿಯರು ಮತ್ತು ನಾಯಕರು ಒಗ್ಗಟ್ಟಾಗಿ ಎದುರಿಸುತ್ತೇವೆ. ಕಾಂಗ್ರೆಸ್ ಬಗ್ಗೆ ಜನರಿಗೆ ನಿರಾಶೆ ಉಂಟಾಗಿದೆ. ಇದಕ್ಕೆ ಪರ್ಯಾಯ ಎಂದರೆ ಬಿಜೆಪಿ ಮಾತ್ರ ಎಂಬುದು ಗೊತ್ತಾಗಿದೆ” ಎಂದರು ಹೇಳಿದರು.

“ಮತ್ತೊಮ್ಮೆ ನರೇಂದ್ರ ಮೋದಿ ಅವರಿಗೆ ಸಂಪೂರ್ಣ ಬೆಂಬಲ ಕೊಡಬೇಕು. ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲುವಂತೆ ಶ್ರಮಿಸಬೇಕು. ಮೈಸೂರು ಭಾಗದಲ್ಲೂ ಬಿಜೆಪಿ ಪತಾಕೆಯನ್ನು ಹಾರಿಸುವ ವಿಶ್ವಾಸ ಇದೆ” ಎಂದು ತಿಳಿಸಿದರು.

“ಜೋಡೆತ್ತುಗಳಂತಿದ್ದ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರ ವಿಚಾರ ಜನರ ನಡುವೆ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಕುರ್ಚಿ ಸಂಬಂಧ ಡಿ.ಕೆ.ಶಿವಕುಮಾರ್ ಕಾತರದಿಂದ ಕಾಯುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಅಧಿಕಾರ ಕಡಿಮೆ ಮಾಡಲು ಎಷ್ಟು ಡಿಸಿಎಂ ಹುದ್ದೆ ಸೃಷ್ಟಿಸಬಹುದೆಂದು ರಾಜಕೀಯ ಹುನ್ನಾರ ನಡೆದಿದೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments