Homeಕರ್ನಾಟಕಕಾಂಗ್ರೆಸ್‌ ಹಿರಿಯ ಮುಖಂಡ, ಮಾಜಿ ಶಾಸಕ ಆರ್.ನಾರಾಯಣ್ ನಿಧನ

ಕಾಂಗ್ರೆಸ್‌ ಹಿರಿಯ ಮುಖಂಡ, ಮಾಜಿ ಶಾಸಕ ಆರ್.ನಾರಾಯಣ್ ನಿಧನ

ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಆರ್.ನಾರಾಯಣ್ (80) ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ತುಮಕೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲೇ ವಿಧಿವಶರಾಗಿದ್ದಾರೆ. ನಾರಾಯಣ್‌ ಅವಿವಾಹಿತರಾಗಿದ್ದು, ಒಬ್ಬಂಟಿಯಾಗಿ ನಗರದ ಸಿಎಸ್‌ಐ ಲೇಔಟ್‌ನಲ್ಲಿರುವ ಮನೆಯಲ್ಲಿ ವಾಸವಿದ್ದರು.

ಬೆಳ್ಳಾವಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ (1989, 1994 ಹಾಗೂ 1999) ಶಾಸಕರಾಗಿ ಆಯ್ಕೆ ಆಗಿದ್ದರು. ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಕಾಂಗ್ರೆಸ್ ಮಾಜಿ ಶಾಸಕರಾದ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

“ಆರ್.ನಾರಾಯಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ನಾರಾಯಣ ಅವರು ಸತತವಾಗಿ ಮೂರು ಬಾರಿ ಶಾಸಕರಾಗಿದ್ದರು. ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಅಧ್ಯಕ್ಷರೂ ಆಗಿದ್ದರು. ಕೆಂಗಲ್ ಹನುಮಂತಯ್ಯ ಅವರ ಅನುಯಾಯಿಯಾಗಿ ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಗೆ ಶ್ರಮಿಸಿದವರು. ತಮ್ಮ ಅಚ್ಚುಕಟ್ಟುತನದಿಂದ ಕೂಡಿದ ಕೆಲಸಕ್ಕೆ ಹೆಸರಾಗಿದ್ದವರು” ಎಂದು ನೆನಪಿಸಿಕೊಂಡಿದ್ದಾರೆ.

“ತುಮಕೂರು ಜಿಲ್ಲೆಯಲ್ಲಿ ಪಕ್ಷದ ಪ್ರಮುಖ ನಾಯಕರಾಗಿದ್ದರು. ಕಾಂಗ್ರೆಸ್ ಪಕ್ಷದ ಏಳಿಗೆಗೆ ಇವರ ಕೊಡುಗೆ ಅಪಾರ. ಸರಳ, ಸಜ್ಜನಿಕೆಯ ವ್ಯಕ್ತಿತ್ವ ದೂರವಾಗಿರುವುದು ನೋವಿನ ಸಂಗತಿ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments