Homeಕರ್ನಾಟಕಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ, ಸಿಎಂ ಸೇರಿ ಗಣ್ಯರಿಂದ ಸಂತಾಪ

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ, ಸಿಎಂ ಸೇರಿ ಗಣ್ಯರಿಂದ ಸಂತಾಪ

ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ  ನಿಧನರಾಗಿದ್ದಾರೆ.

ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ. 1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ ಸದಸ್ಯರಾಗಿದ್ದು, ಅವರು ಭಾರತದಲ್ಲಿ ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾಗಿದ್ದರು.

ಶಾಮನೂರು ಶಿವಶಂಕರಪ್ಪ ಅವರು ವಿಧಾನಸಭೆಗೆ ಆರು ಸಲ ಶಾಸಕರಾಗಿ, ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದಾರೆ. 1997ರಲ್ಲಿ ದಾವಣಗೆರೆ ಲೋಕಸಭೆ ಮಧ್ಯಂತರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಐದು ದೇಶಕದ ರಾಜಕೀಯ ಜೀವನದಲ್ಲಿ ಒಂದು ಬಾರಿ ಸೋಲನ್ನಪ್ಪಿದ್ದರು. 1994, 2004, 2008, 2013, 2018, 2023 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ

ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ.
ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

“ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments