ನಾಡಿನ ಹಿರಿಯ ಸಾಹಿತಿ, ಜನಪ್ರಿಯ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರು ವಯೋಸಹಜವಾಗಿ ಬುಧವಾರ ಸಾವನ್ನಪ್ಪಿದ್ದಾರೆ.
ಅವರಿಗೆ 94 ವಯಸ್ಸಾಗಿದ್ದು, ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಮಧ್ಯಾಹ್ನ ವಿಧಿವಶರಾಗಿದ್ದಾರೆ.
ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಪತ್ರಕರ್ತ ವಿಶ್ವೇಶ್ವರ ಭಟ್ ಅವರ ಬೆಂಗಳೂರಿನ ಮನೆಯಲ್ಲಿ ಬಂದು ವಾಸವಾಗಿದ್ದರು.
ಅವರ ಸಾಹಿತ್ಯಿ ಸಾಧನೆ ಗುರುತಿಸಿ ಕೇಂದ್ರ ಸರ್ಕಾರ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಿದೆ. ಎಸ್. ಎಲ್. ಭೈರಪ್ಪ ಅವರು ಕನ್ನಡದ ಪ್ರಮುಖ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದರು. ಅವರದ್ದೇ ಆದ ಓದುಗರ ಅಭಿಮಾನಿ ವರ್ಗವಿದೆ. ಅವರ ಕಾದಂಬರಿಗಳು ಭಾರತೀಯ ಬೇರೆ ಬೇರೆ ಭಾಷೆಗಳಿಗೆ ಅನುವಾದಗೊಂಡಿವೆ.
ಭೈರಪ್ಪ ಅವರಿಗೆ ಸರಸ್ವತಿ ಸಮ್ಮಾನ್ (2010), ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975), ಪದ್ಮಭೂಷಣ (2023) ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿಗಳು ಲಭಿಸಿವೆ. ತಮ್ಮ ಹುಟ್ಟೂರಿನ ಅಭಿವೃದ್ಧಿಗಾಗಿ ಮತ್ತು ಸಮಾಜದ ಇತರ ಕಾರ್ಯಗಳಿಗೆ ನೆರವು ನೀಡಲು ಡಾ. ಎಸ್. ಎಲ್. ಭೈರಪ್ಪ ಪ್ರತಿಷ್ಠಾನ (ರಿ) ಸ್ಥಾಪಿಸಿದ್ದಾರೆ.


