ರಿಗೆ ಅನ್ಯಾಯ ವಿಚಾರವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸಿರುವುದನ್ನು ವಿರೋಧಿಸಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಧರಣಿ ಮುಂದುವರಿಸಿದರು.
ಹತ್ತು ನಿಮಿಷ ಕಲಾಪ ಮುಂದೂಡಿದ ಸಭಾಧ್ಯಕ್ಷ ಯು.ಟಿ. ಖಾದರ್, ತಮ್ಮ ಕಚೇರಿಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಮಧ್ಯೆ ಸಂಧಾನಕ್ಕೆ ಯತ್ನಿಸಿದರು.
ಆದರೆ, ಬಿಜೆಪಿ ಸದಸ್ಯರು ಪಟ್ಟು ಸಡಿಲಿಸದ ಕಾರಣ ಸಂಧಾನ ಯತ್ನ ವಿಫಲವಾಯಿತು. ಪುನಃ ಕಲಾಪ ಆರಂಭವಾದಾಗಲೂ ವಿರೋಧ ಪಕ್ಷಗಳ ಸದಸ್ಯರು ಧರಣಿ ಮುಂದುವರಿಸಿದರು. ಕೇಂದ್ರ ಸರ್ಕಾರದ ವಿರುದ್ಧದ ನಿರ್ಣಯಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.
“ಸದನದ ನಿಯಮಗಳನ್ನ ಗಾಳಿಗೆ ತೂರಿ ರಾಜ್ಯ ಕಾಂಗ್ರೆಸ್ ಸರ್ಕಾರ ತಂದ ಏಕಪಕ್ಷೀಯ, ರಾಜಕೀಯ ಪ್ರೇರಿತ ನಿರ್ಣಯ ಮಂಡಿಸಿದೆ” ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ನಿರ್ಣಯ ಮಂಡಿಸಿದ್ದಾರೆ.
ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಸಹಕಾರಿ ಒಕ್ಕೂಟ ವ್ಯವಸ್ಥೆಯ ಬಗ್ಗೆ ತೋರಿರುವ ಬದ್ಧತೆ, ಕರ್ನಾಟಕಕ್ಕೆ ನೀಡಿರುವ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಎನ್ ಡಿಎ ಮೈತ್ರಿಕೂಟದ ವತಿಯಿಂದ ಸದನದಲ್ಲಿ ನಿರ್ಣಯ ಮಂಡಿಸಿರುವ ಪ್ರತಿಯನ್ನು ಆರ್ ಅಶೋಕ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
“ತೆರಿಗೆ ಸಂಗ್ರಹ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ವಿಫಲವಾಗಿರುವ ಸಿಎಂ ಸಿದ್ದರಾಮಯ್ಯನವರು ತಮ್ಮ ತಪ್ಪುಗಳನ್ನು ಮರೆಮಾಚುವ ಉದ್ದೇಶದಿಂದ ಕೇಂದ್ರ ಸರ್ಕಾರವನ್ನ ಪದೇ ಪದೇ ದೂಷಿಸುವ ಪ್ರವೃತ್ತಿಯನ್ನು ಕೈಬಿಡಬೇಕೆಂದು ನಿರ್ಣಯದ ಮೂಲಕ ಒತ್ತಾಯ ಮಾಡಲಾಯಿತು” ಎಂದು ತಿಳಿಸಿದ್ದಾರೆ.