Homeಕರ್ನಾಟಕಅಧಿವೇಶನ | ನೀಟ್ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕಾರ

ಅಧಿವೇಶನ | ನೀಟ್ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕಾರ

ಬಿಜೆಪಿ-ಜೆಡಿಎಸ್‌ ಸದಸ್ಯರ ಗಲಾಟೆ ನಡುವೆಯೇ ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಕೆಲವು ವಿಧೇಯಕಗಳು ಅಂಗೀಕಾರವಾದವು.

ಮುಖ್ಯವಾಗಿ ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕೆಂದು ಒತ್ತಾಯಿಸಲಾಗಿದೆ.

ಬುಧವರಾ ರಾತ್ರಿ ವಿಧಾನಸಭೆಯಲ್ಲೇ ಮಲಗಿ, ಅಹೋರಾತ್ರಿ ಧರಣಿ ಮಾಡಿದ್ದ ಬಿಜೆಪಿ-ಜೆಡಿಎಸ್ ನಾಯಕರು ಇಂದು ಕಲಾಪ ಆರಂಭವಾಗುತ್ತಿದ್ದಂತೆ ಮುಡಾ ಹಗರಣ ವಿಚಾರ ಪ್ರಸ್ತಾಪಿಸಿ, ನಿರಂತರ ಗಲಾಟೆ ಗದ್ದಲ ಎಬ್ಬಿಸಿದರು.

ಗಾಲಟೆ ವೇಳೆಯೇ ಡಿಸಿಎಂ ಡಿಕೆ ಶಿವಕುಮಾರ್ ಅವರು ನೀಟ್ ರದ್ದತಿಗೆ ಕೋರಿ ನಿರ್ಣಯ ಮಂಡಿಸಿದರು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕು. ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.

ಇನ್ನು ಒನ್ ನೇಷನ್, ಒನ್ ಎಲೆಕ್ಷನ್ ವಿರೋಧಿಸಿ ವಿಧಾನ‌ ಪರಿಷತ್​ನಲ್ಲಿ ಸಿಎಂ ಸಿದ್ದರಾಮಯ್ಯ ​ನಿರ್ಣಯ ಮಂಡಿಸಿದರು. ಬಿಜೆಪಿ, ಜೆಡಿಎಸ್ ಸದಸ್ಯ ಬಲ ಹೆಚ್ಚಿದ್ದರೂ ಗದ್ದಲದಿಂದ ನಿರ್ಣಯ ಪಾಸ್ ಮಾಡಲಾಗಿದೆ.‌

ಒಂದು ರಾಷ್ಟ್ರ ಒಂದು ಚುನಾವಣೆ ನೀತಿಯನ್ನು ಅನುಷ್ಠಾನಗೊಳಿಸಬಾರದು. ಈ ಬಗ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.

ವಿಧಾನಸಭೆಯಲ್ಲಿ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಸಮಾನವಾಗಿ ಇತರ ಪಾರಂಪರಿಕ ಅರಣ್ಯ ವಾಸಿಗಳನ್ನು ಪರಿಗಣಿಸುವ ಹಾಗೆ, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ(ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006(2007ರ ಕೇಂದ್ರ ಅಧಿನಿಯಮ 02) ಮತ್ತು ಅದರ ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತ ಮತ್ತು ಸಮರ್ಪಕವಾಗಿ ಮಾರ್ಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.

ನಾಲ್ಕು ವಿಧೇಯಕ ಅಂಗೀಕಾರ

ಹೊಸ ಜನಗಣತಿಯ ಆಧಾರದಲ್ಲಿ ಕ್ಷೇತ್ರ ಪುನರ್ ವಿಂಗಡಣಾ ಪ್ರಕ್ರಿಯೆ ನಡೆಸಬಾರದು ಮತ್ತು ಜನಸಂಖ್ಯೆ ಆಧರಿಸಿ ಸ್ಥಾನಗಳ ಹೆಚ್ಚಿಸುವ ಸಂದರ್ಭದಲ್ಲಿ ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಮತ್ತು ವಿಧಾನಸಭೆ ಸ್ಥಾನಗಳನ್ನು 1971ರ ಜನಗಣತಿ ಆಧರಿಸಿ ನಿರ್ಧರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ. ಚರ್ಚೆಗೆ ವಿಶೇಷ ಸದನ ಕರೆಯುವಂತೆ ವಿಪಕ್ಷ ನಾಯಕ ಅಶೋಕ್ ಒತ್ತಾಯಿಸಿದ್ದು ವಿಪಕ್ಷಗಳ ಬೇಡಿಕೆಗೆ ಮಣಿಯದೇ ನಿರ್ಣಯ ಅಂಗೀಕಾರ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments