Homeಕರ್ನಾಟಕಅಧಿವೇಶನ | ವಾಲ್ಮೀಕಿ ನಿಗಮ ಅಕ್ರಮ ಬಗ್ಗೆ ಪ್ರತಿಪಕ್ಷ ನಾಯಕರಿಂದ ವಗ್ದಾಳಿ; ಸಿಎಂ ಸಿದ್ದರಾಮಯ್ಯ ತಿರುಗೇಟು

ಅಧಿವೇಶನ | ವಾಲ್ಮೀಕಿ ನಿಗಮ ಅಕ್ರಮ ಬಗ್ಗೆ ಪ್ರತಿಪಕ್ಷ ನಾಯಕರಿಂದ ವಗ್ದಾಳಿ; ಸಿಎಂ ಸಿದ್ದರಾಮಯ್ಯ ತಿರುಗೇಟು

ಪರಿಶಿಷ್ಟ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ ಎಸ್‌ಸಿ ಎಸ್‌ಪಿ/ ಟಿಎಸ್‌ಪಿ ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ನಿಯಮ‌ 69ರ ಅಡಿಯಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮ ಕುರಿತಾದ ಚರ್ಚೆಗೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸಿ, “ನಮ್ಮ ಸರ್ಕಾರ ಬಂದ ಮೇಲೆ ಇಡೀ ದೇಶದಲ್ಲಿ ಎಸ್‌ಸಿ ಎಸ್‌ಪಿ/ ಟಿಎಸ್‌ಪಿ ಕಾಯ್ದೆ ತಂದವರು ನಾವು. ಇಡೀ ದೇಶದಲ್ಲಿ ಕರ್ನಾಟಕ ಮಾತ್ರ ಇಂತಹ ಪರಿಣಾಮಕಾರಿ ಕಾಯ್ದೆಯನ್ನು ಜಾರಿ ಮಾಡಿದ್ದೇವೆ” ಎಂದರು.

“ಗುತ್ತಿಗೆಯಲ್ಲೂ ಎಸ್‌ಸಿ ಎಸ್‌ಟಿ ಸಮುದಾಯಗಳಿಗೆ ಮೀಸಲಾತಿ ಜಾರಿ ಮಾಡಿರುವುದು ನಾವು ಮಾತ್ರ. ಇಂತಹದನ್ನು ಬಿಜೆಪಿಯವರು ಇದುವರೆಗೂ ಏಕೆ ಜಾರಿ ಮಾಡಿಲ್ಲ?ಎಸ್‌ಟಿ ಎಸ್‌ಟಿ ಉದ್ದಿಮೆಗಳಿಗೆ / ಉದ್ಯಮಗಳಿಗೆ ವಿಶೇಷ ಸಾಲದ ಸವಲತ್ತು, ಕೆಐಎಡಿಬಿ ಭೂಮಿ ವಿಚಾರದಲ್ಲಿ ಈ ಸಮುದಾಯಗಳಿಗೆ ಅನುಕೂಲ ಮಾಡಿ ಕಾನೂನು ತಂದವರು ನಾವು” ಎಂದು ಸಮರ್ಥಿಸಿಕೊಂಡರು.

“ನಾವು ಎಸ್‌ಟಿ ಎಸ್ಟಿ ಸಮುದಾಯದವರ ವಿರೋಧಿಯಾಗಿದ್ದರೆ ಇಷ್ಟೆಲ್ಲವನ್ನೂ ಜಾರಿ ಮಾಡಲು ಆಗುತ್ತಿತ್ತಾ? ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ದರು. ನಿಮ್ಮಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ” ಎಂದು ತಿರುಗೇಟು ನೀಡಿದರು.

“ಆರ್.ಅಶೋಕ್, ವಿಜಯೇಂದ್ರ ನನ್ನ ರಾಜೀನಾಮೆ ಕೇಳಿದ್ದಾರೆ. ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವರು. ಇವರು ಎಸ್‌ಐಟಿ ಹಿಂದಕ್ಕೆ ಪಡೆಯಿರಿ ಎಂದು ಹೇಳಿದ್ದಾರೆ. ನೀವು ಗೃಹ ಮಂತ್ರಿ ಆಗಿದ್ದಾಗಲೂ ಎಸ್‌ಐಟಿ ಬಗ್ಗೆ ಹೀಗೆ ಹೇಳಿದ್ದೀರಾ” ಎಂದು ಪ್ರಶ್ನಿಸಿದರು.

“26-5-2024 ರಂದು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡರು. ಇವರು ತಮಿಳುನಾಡಿನ ಬೋವಿ ಸಮುದಾಯದವರು. ವಿರೋಧ ಪಕ್ಷದವರು ಸಾವಿರ ಸಾರಿ ದಲಿತ, ದಲಿತ ಅಂತ ಮಾತಾಡಿದ್ದಾರೆ” ಎಂದು ಹೇಳಿದರು.

“ನಾನು ಹಿಂದಿನ ಸಿದ್ದರಾಮಯ್ಯ ಅಲ್ಲ ಅಂತ ಯತ್ನಾಳ್ ಅವರು ಹೇಳಿದರು. ಯತ್ನಾಳ್ ಅವರು ಕೂಡ ವಾಜಪೇಯಿ ಅವರ ಸಂಪುಟದಲ್ಲಿದ್ದ ಯತ್ನಾಳ್ ಆಗಿ ಉಳಿದಿಲ್ಲ ಈಗ. ಆರ್. ಅಶೋಕ್ ಮೂರು ಗಂಟೆ ನಾಲ್ಕು ನಿಮಿಷ ಸದನದಲ್ಲಿ ಆರೋಪಿಸಿದ್ದೆಲ್ಲಾ ಪತ್ರಿಕಾ ಸುದ್ದಿಗಳ ಆಧಾರದಲ್ಲಿ ಮಾತ್ರ” ಎಂದರು.

ನಾವು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಪತ್ನಿ ಕೊಟ್ಟ ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ಶುರು ಮಾಡಿದೆವು. ನಿಗಮದ ಜನರಲ್ ಮ್ಯಾನೇಜರ್ ರಾಜಶೇಖರ್ ಕೊಟ್ಟ ಆರು ಮಂದಿ ವಿರುದ್ದ ನೀಡಿದ ದೂರಿನ ಆಧಾರದಲ್ಲೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments