Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ | ಎಚ್‌ ಡಿ ರೇವಣ್ಣಗೆ ಒಂದು ದಿನದ ಮಟ್ಟಿಗೆ ಜಾಮೀನು, ಬಂಧನದ...

ಲೈಂಗಿಕ ದೌರ್ಜನ್ಯ ಪ್ರಕರಣ | ಎಚ್‌ ಡಿ ರೇವಣ್ಣಗೆ ಒಂದು ದಿನದ ಮಟ್ಟಿಗೆ ಜಾಮೀನು, ಬಂಧನದ ಭೀತಿಯಿಂದ ಬಚಾವ್

ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ಎಚ್‌ ಡಿ ರೇವಣ್ಣಗೆ ಕೋರ್ಟ್ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು 21 ಗಂಟೆಗೆ ಮಾತ್ರ ಮಂಜೂರಾಗಿದ್ದು, ನಾಳೆ ಮಧ್ಯಾಹ್ನ 3 ಗಂಟೆ ಮತ್ತೆ ವಿಚಾರಣೆಗೆ ಹಾಜರಾಗಬೇಕಿದೆ.

ಲೈಗಿಂಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಕೇಸ್‌ನಲ್ಲಿ ಜಾಮೀನಿನ ಮೇಲೆ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿರುವ ಎಚ್‌ ಡಿ ರೇವಣ್ಣ‌ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜಾಮೀನು ಪಡೆಯಲು ರೇವಣ್ಣ ಮುಂದಾಗಿದ್ದರು. ಬೆಂಗಳೂರಿನಲ್ಲಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಅರ್ಜಿ ಸಲ್ಲಿಸಿದ್ದರು.

ಎಚ್‌ ಡಿ ರೇವಣ್ಣ ಗುರುವಾರ ಬೆಳಿಗ್ಗೆ ಬೆಂಗಳೂರಿನ ಜಯನಗರದ ಗಣಪತಿ ದೇವಸ್ಥಾನ, ಬಸವನಗುಡಿಯ ಗಂಗಾಧರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನ್ಯಾಯಾಧೀಶರ ಸೂಚನೆ ಮೇರೆಗೆ ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಕೋರ್ಟ್ 5 ಲಕ್ಷ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ 42 ಎಸಿಎಂಎಂ ನ್ಯಾಯಧೀಶರಾದ ಪ್ರೀತ್ ಆದೇಶಿಸಿದ್ದಾರೆ. ನಾಳೆ ಮಧ್ಯಾಹ್ನ ಮತ್ತೆ ರೇವಣ್ಣ ಕೋರ್ಟ್​ಗೆ ಹಾಜರಾಗಬೇಕಿದ್ದು, ಮತ್ತೆ ವಿಚಾರಣೆ ಮುಂದುವರಿಯಲಿದೆ.

ಎಸ್‌ಐಟಿ ಮೇಲ್ಮನವಿ

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದಿರುವ ರೇವಣ್ಣ ಮಂಗಳವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೇ ಪ್ರಕರಣದಲ್ಲಿ 2ನೇ ಆರೋಪಿ ಸತೀಶ್ ಬಾಬು ವಿಚಾರಣೆ ನಡೆಸಿರುವ ಎಸ್ಐಟಿ ಮಹತ್ವದ ಸಾಕ್ಷಿ ಕಲೆ ಹಾಕಿದೆ ಎಂದು ತಿಳಿದುಬಂದಿದ್ದು, ಹೀಗಾಗಿ ರೇವಣ್ಣ ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಎಸ್‌ಐಟಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments