Homeಕರ್ನಾಟಕಪತಿ ನಿವೃತ್ತಿ, ಪತ್ನಿ ಶಾಲಿನಿ ರಜನೀಶ್‌ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆ

ಪತಿ ನಿವೃತ್ತಿ, ಪತ್ನಿ ಶಾಲಿನಿ ರಜನೀಶ್‌ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆ

​ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ಅವರ ಸ್ಥಾನಕ್ಕೆ ರಜನೀಶ್​ ಪತ್ನಿ ಶಾಲಿನಿ ಅವರೇ ಮುಂದಿನ ನೂತನ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ.

ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ಶಾಲಿನಿ ರಜನೀಶ್​ರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಮಾಡಲು ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾಹಿತಿ ಹಂಚಿಕೊಂಡ ಕಾನೂನು ಸಚಿವ ಎಚ್‌ ಕೆ ಪಾಟೀಲ್‌ “ರಾಜ್ಯ ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ 5 ದಿನದಲ್ಲಿ​ ನಿವೃತ್ತಿ ಆಗಲಿದ್ದಾರೆ. ಹೀಗಾಗಿ ನೂತನ ಸಿಎಸ್​ ಆಗಿ ಶಾಲಿನಿ ರಜನೀಶ್​ರನ್ನು ನೇಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ” ಎಂದು ಹೇಳಿದರು.

“ನೂತನ ಕಾರ್ಯದರ್ಶಿ ಯಾರು ಎಂಬ ಚರ್ಚೆ ನಡೆದಿತ್ತು. ಜ್ಯೇಷ್ಠತೆಯಲ್ಲಿ ಕ್ರಮವಾಗಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್‌ ಸೇಠ್‌, ಅಭಿವೃದ್ಧಿ ಆಯುಕ್ತರಾಗಿರುವ ಶಾಲಿನಿ ರಜನೀಶ್‌ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ ಇಬ್ಬರ ಪೈಕಿ ಶಾಲಿನಿ ರಜನೀಶ್‌ ಅವರೇ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುವ ಸಾಧ್ಯತೆ ದಟ್ಟವಾಗಿತ್ತು.

1989ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ. ಮುಖ್ಯ ಕಾರ್ಯದರ್ಶಿ ಹುದ್ದೆಗೇರಿದರೆ ದಂಪತಿಯ ಸಾಲಿಗೆ ರಜನೀಶ್‌ ಗೋಯೆಲ್‌, ಶಾಲಿನಿ ರಜನೀಶ್‌ ಸೇರಿದ್ದಾರೆ. ಈ ಹಿಂದೆ ಬಿ ಕೆ ಭಟ್ಟಾಚಾರ್ಯ ಹಾಗೂ ತೆರೆಸಾ ಭಟ್ಟಾಚಾರ್ಯ ದಂಪತಿ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments