Homeಕರ್ನಾಟಕಶಿವಮೊಗ್ಗ | ಬಿಜೆಪಿಯ ಜನ ಬೆಂಬಲ ಇಂಡಿಯಾ ಒಕ್ಕೂಟದ ನಿದ್ದೆಗೆಡಿಸಿದೆ: ಪ್ರಧಾನಿ ಮೋದಿ

ಶಿವಮೊಗ್ಗ | ಬಿಜೆಪಿಯ ಜನ ಬೆಂಬಲ ಇಂಡಿಯಾ ಒಕ್ಕೂಟದ ನಿದ್ದೆಗೆಡಿಸಿದೆ: ಪ್ರಧಾನಿ ಮೋದಿ

ಕರ್ನಾಟಕ ಸರಕಾರದಲ್ಲಿ ಸಿಎಂ, ಭವಿಷ್ಯದ ಸಿಎಂ, ಸೂಪರ್ ಸಿಎಂ, ಶ್ಯಾಡೊ ಸಿಎಂ ಜೊತೆಗೆ ದೆಹಲಿಯ ಕಲೆಕ್ಷನ್ ಸಿಎಂ ಇದ್ದಾರೆ. ಇಲ್ಲಿನ ಜನರು ಕಾಂಗ್ರೆಸ್‍ನ ಸಾಲವನ್ನು ತೀರಿಸುವ ಕೆಲಸ ಮಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದರು.

ಶಿವಮೊಗ್ಗದಲ್ಲಿ ಸೋಮವಾರ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, “ಕರ್ನಾಟಕದ ಜನರಲ್ಲಿ ಕಾಂಗ್ರೆಸ್ ಸರಕಾರದ ಬಗ್ಗೆ ಸಿಟ್ಟಿದೆ. ಈ ಸಿಟ್ಟಿನಿಂದ ಬಿಜೆಪಿ- ಎನ್‍ಡಿಎ ಸಂಸದರು ಎಲ್ಲ ಸೀಟುಗಳಲ್ಲೂ ಗೆಲ್ಲುವ ವಿಶ್ವಾಸವಿದೆ” ಎಂದರು.

“ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಎನ್.ಡಿ.ಎ. ಗೆಲುವಿನಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಿರಬೇಕು. ಪ್ರತಿ ಪೋಲಿಂಗ್ ಬೂತಿನಲ್ಲಿ ಕಮಲ ಅರಳುವಂತೆ ನೋಡಿಕೊಳ್ಳಿ” ಎಂದು ಮನವಿ ಮಾಡಿದರು.

“ಭ್ರಷ್ಟಾಚಾರ, ತುಷ್ಟೀಕರಣದ ನೀತಿಯನ್ನು ತನ್ನಾಗಿಸಿದ ಇಂಡಿಯಾ ಒಕ್ಕೂಟವು ಬಿಜೆಪಿ ಜನಬೆಂಬಲ ಗಮನಿಸಿ ನಿದ್ದೆಗೆಡುವ ಸ್ಥಿತಿ ಬಂದಿದೆ. ಯಡಿಯೂರಪ್ಪ ಅವರ ತಪೋಭೂಮಿ ಇದು” ಎಂದರು.

“ಕಾಂಗ್ರೆಸ್ ಸುಳ್ಳುಗಳ ಮೂಲಕ ಅಧಿಕಾರಕ್ಕೆ ಬಂತು. ಬಳಿಕ ಕೇಂದ್ರ, ಮೋದಿಯವರ ಮೇಲೆ ಆರೋಪ ಹೊರಿಸುತ್ತಿದೆ. ಕಾಂಗ್ರೆಸ್ ಪಕ್ಷ ಜನರ ಅಭಿವೃದ್ಧಿಗಾಗಿ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಜನರನ್ನು ಲೂಟಿ ಮಾಡಿ ಕಿಸೆ ಭರ್ತಿ ಮಾಡುವ ಕೆಲಸ ಮಾಡುತ್ತದೆ” ಎಂದು ಟೀಕಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, “ಮೋದಿ ಅವರು ಭಾರತದ ಆಶಾಕಿರಣ. ಇಂದು ಅವರು ಕರ್ನಾಟಕದಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ಅವರು ಕೇವಲ ಚುನಾವಣೆಗಾಗಿ ಕೆಲಸ ಮಾಡುತ್ತಿಲ್ಲ. ಗಡಿ ಸುರಕ್ಷತೆ, ರೈತರಿಗಾಗಿ ಕಿಸಾನ್ ಸಮ್ಮಾನ್ ಯೋಜನೆ ಜಾರಿ, ಕಾಶ್ಮೀರದ ಸ್ವಾಯತ್ತತೆಗಾಗಿ 370 ವಿಧಿ ರದ್ದು, ಶ್ರೀರಾಮ ಮಂದಿರ ನಿರ್ಮಾಣ ಸೇರಿದಂತೆ ಭಾರತವನ್ನು ವಿಶ್ವದ 5ನೇ ಬಲಿಷ್ಠ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವಂತೆ ಮಾಡಿದ್ದಾರೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments