Homeಕರ್ನಾಟಕಸಿದ್ದರಾಮಯ್ಯ ಅವರು 20 ತಿಂಗಳಲ್ಲಿ 9 ರೂ. ಹಾಲಿನ ದರ ಹೆಚ್ಚಿಸಿದ್ದಾರೆ: ಆರ್‌ ಅಶೋಕ್

ಸಿದ್ದರಾಮಯ್ಯ ಅವರು 20 ತಿಂಗಳಲ್ಲಿ 9 ರೂ. ಹಾಲಿನ ದರ ಹೆಚ್ಚಿಸಿದ್ದಾರೆ: ಆರ್‌ ಅಶೋಕ್

ಸಿಎಂ ಸಿದ್ದರಾಮಯ್ಯ ಅವರೇ ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 20 ತಿಂಗಳಿನಲ್ಲಿ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂಪಾಯಿ ಹೆಚ್ಚಿಸಿದ್ದೀರಿ. 2023ರ ಆಗಸ್ಟ್ ನಲ್ಲಿ 3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ 2024 ಜೂನ್ ನಲ್ಲಿ 2 ರೂಪಾಯಿ ಏರಿಕೆ ಆಯ್ತು. ಈಗ ಮತ್ತೊಮ್ಮೆ ಏಕಾಏಕಿ 4 ರೂಪಾಯಿ ಹೆಚ್ಚಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ದಿನಬಳಕೆ ವಸ್ತುಗಳ ಬೆಲೆಯಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ”ಎಂದು ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

ನಿಮಗೆ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ. ಒಂದು ವೇಳೆ ಗ್ರಾಹಕರ ಮೇಲೆ ಹೊರೆ ಹೊರಿಸುವುದು ಅನಿವಾರ್ಯವಾದರೆ, ಹೆಚ್ಚಳ ಮಾಡಿರುವ ₹4 ರೂಪಾಯಿ ನೇರವಾಗಿ ಹಾಲು ಉತ್ಪಾದಕರ ಕೈಸೇರುವಂತೆ ನೋಡಿಕೊಳ್ಳಿ. ಆಡಳಿತ ವೆಚ್ಚ, ಮತ್ತೊಂದು ವೆಚ್ಚ ಎಂದು ಅತ್ತ ರೈತರಿಗೂ ಲಾಭವಿಲ್ಲದೆ ಇತ್ತ ಗ್ರಾಹಕರ ಜೇಬಿಗೂ ಕತ್ತರಿ ಹಾಕಿದರೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ”  ಎಚ್ಚರಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments