Homeಕರ್ನಾಟಕ'ವಾದಾ ದಿಯಾ: ಪೂರಾ ಕಿಯಾ' ಎಂದು ಬಿಜೆಪಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

‘ವಾದಾ ದಿಯಾ: ಪೂರಾ ಕಿಯಾ’ ಎಂದು ಬಿಜೆಪಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ವಾದಾ ದಿಯಾ: ಪೂರಾ ಕಿಯಾ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿಯ ಸುಳ್ಳು ಜಾಹಿರಾತಿಗೆ ತಿರುಗೇಟು ನೀಡಿದರು.

ಸಂಡೂರು ವಿಧಾನಸಭಾ ಕ್ಷೇತ್ರದ ಬೊಮ್ಮಘಟ್ಟದಲ್ಲಿ ನಡೆದ ಬೃಹತ್ ಜನ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಮ್ಮ ಅವರ ಗೆಲುವಿಗೆ ಪ್ರಚಾರ ನಡೆಸಿ ಮಾತನಾಡಿದರು.

ಮಹಾರಾಷ್ಟ್ರದ ಬಿಜೆಪಿ ‘ಕರ್ನಾಟಕ ಸರ್ಕಾರ ವಾದಾ ಕಿಯಾ: ಧೋಖಾ ದಿಯಾ’ ಎಂದು ಸುಳ್ಳು ಜಾಹಿರಾತು ನೀಡಿದೆ. ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆ ನೀಡಿತ್ತು. ಭರವಸೆ ಈಡೇರಿಸದೇ, ಯೋಜನೆಯನ್ನೇ ಇನ್ನೂ ಆರಂಭಿಸದೆ ವಂಚಿಸಿದೆ ಎನ್ನುವ ಅರ್ಥದ ಪರಮ ಸುಳ್ಳಿನ ಜಾಹೀರಾತುಗಳನ್ನು ಪುಟಗಟ್ಟಲೆ ನೀಡಿದೆ” ಎಂದ ಹರಿಹಾಯ್ದರು.

ಸುಳ್ಳೇ ಬಿಜೆಪಿಯ ಮನೆ ದೇವರು: ಸಿಎಂ

ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ರಾಜ್ಯದಲ್ಲಿ ಶಕ್ತಿ ಯೋಜನೆ ಸೇರಿದಂತೆ ಐದಕ್ಕೆ ಐದು ಗ್ಯಾರಂಟಿಗಳು ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದೆ. ಗೃಹಲಕ್ಷ್ಮಿಯ ಮುಂದಿನ ಕಂತಿನ ಹಣ ಒಂದೆರಡು ದಿನಗಳಲ್ಲೇ ಬಿಡುಗಡೆ ಕೂಡ ಆಗುತ್ತದೆ. ಆದರೆ ಬಿಜೆಪಿಯವರು ಸುಳ್ಳುಗಳನ್ನು ಹರಡಿಸುತ್ತಾ, ಸುಳ್ಳುಗಳನ್ನು ಹರಡುವುದಕ್ಕೇ ಕೋಟಿ ಕೋಟಿ ಖರ್ಚು ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಹೇಳಿದ್ದೇನು ? ಮಾಡಿದ್ದೇನು?

“ವಿದೇಶದಲ್ಲಿರುವ ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಕೊಡ್ತೀವಿ ಅಂತ ಹೇಳಿದ್ರಲ್ಲಾ ಮೋದಿಯವರೇ ಕೊಟ್ರೇನ್ರೀ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ, ಉದ್ಯೋಗ ಸೃಷ್ಟಿ ಮಾಡಿದ್ರಾ ? ಎಲ್ರೀ ಸ್ವಾಮಿ ನಿಮ್ಮ ಅಚ್ಚೆ ದಿನ್? ರೈತರ ಆದಾಯ ದುಪ್ಪಟ್ಟು ಮಾಡ್ತೀನಿ ಅಂದ್ರಲ್ಲಾ ಮೋದಿಯವರೇ ಮಾಡಿದ್ರಾ ? ಮೋದಿ ಪ್ರಧಾನಿ ಆಗುವ ಮೊದಲು ದೇಶದ ಸಾಲ ಇದ್ದದ್ದು 54 ಲಕ್ಷ ಕೋಟಿ ಮಾತ್ರ ಇತ್ತು. ಈಗ ನಿಮ್ಮ ಅವಧಿಯಲ್ಲಿ ದೇಶದ ಸಾಲವನ್ನು 185 ಲಕ್ಷ ಕೋಟಿಗೆ ಏರಿಸಿದ್ದೀರಿ. ಇದೇನಾ ಸ್ವಾಮಿ ನಿಮ್ಮ ಅಚ್ಚೆ ದಿನ್” ಎಂದು ವ್ಯಂಗ್ಯವಾಡಿದರು.

ಅನ್ನಪೂರ್ಣ ಅವರನ್ನು ಗೆಲ್ಲಿಸಿ: ಮನವಿ

ಅನ್ನಪೂರ್ಣ ನನ್ನ ಆತ್ಮೀಯ ಸ್ನೇಹಿತ‌ನ ಮಗಳು. ಇವರನ್ನು ಗೆಲ್ಲಿಸಿ. ಮೂರೂವರೆ ವರ್ಷ ನಮ್ಮದೇ ಸರ್ಕಾರ ಇರತ್ತೆ. ಸಂಡೂರಿನ ಅಭಿವೃದ್ಧಿ ಜೋರಾಗತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು

“ಈ.ತುಕಾರಾಮ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಸದಾ ಕಾತರಿಸುತ್ತಾ ಕೆಲಸ ಮಾಡುವ ಶಾಸಕರಾಗಿದ್ದರು, ಈಗ ಸಂಸದರಾಗಿದ್ದಾರೆ. ಸಂಡೂರಿನಲ್ಲಿ ಈಗ ಆಗಿರುವ ಎಲ್ಲಾ ಅಭಿವೃದ್ಧಿಗಳೂ ಈ.ತುಕಾರಾಮ್ ಮತ್ತು ಸಂತೋಷ್ ಲಾಡ್ ಅವರ ಅವಧಿಯಲ್ಲಿ ಆಗಿರುವಂಥವು” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments