ಎಲ್ಲ ಸಮಾಜಕ್ಕೂ ನ್ಯಾಯ ಕೊಡಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಾರೆ. ಜಾತಿ ಗಣತಿ ಯಾರ ಪರ, ಯಾರ ವಿರೋಧ ಇಲ್ಲ. ಯಾರಿಗೂ ಅನ್ಯಾಯ ಮಾಡುವ ಪ್ರಶ್ನೆ ಈ ಸರ್ಕಾರದಲ್ಲಿ ಮಾಡಲ್ಲ ಎಂದು ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಈ ರಾಜ್ಯದಲ್ಲಿ ಎಲ್ಲರಿಗೂ ನ್ಯಾಯಕೊಡಿಸುವ ಕೆಲಸ ಮಾಡುತ್ತಾರೆ. ಬೇರೆ ಬೇರೆ ಕಾರಣಕ್ಕೆ ಆಯಾ ಸಮಾಜದವರು ಆತಂಕದಲ್ಲಿ ಹೇಳಬಹುದು. ನನಗೆ ಸಿದ್ದರಾಮಯ್ಯನವರ ಮೇಲೆ ನಂಬಿಕೆ ಇದೆ. ಸೂಕ್ತ ರೀತಿಯಲ್ಲಿ ಪರಿಶೀಲನೆ ಮಾಡಿ ಜಾರಿಗೊಳಿಸುತ್ತಾರೆ” ಎಂದರು.
ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರಿಂದ ಭ್ರೂಣ ಹತ್ಯೆ ಪತ್ತೆ ಪ್ರಕರಣವಾಗಿ ಮಾತನಾಡಿ, ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಈ ಬಗ್ಗೆ ಗಮನಹರಿಸುತ್ತಾರೆ. ಸೂಕ್ತ ಕ್ರಮವಾಗುತ್ತದೆ, ಎಲ್ಲದಕ್ಕೂ ಕಡಿವಾಣ ಹಾಕಲಾಗುವುದು. ವಿಪಕ್ಷಗಳು ಈ ಹಿಂದೆ ಆಡಳಿತ ಮಾಡಿದಾಗ ಇದಕ್ಕೆ ಕಡಿವಾಣ ಹಾಕಿಲ್ಲ. ನಾವು ಮಾಡುವಾಗ ಮಾಹಿತಿ ನೀಡಿ ಪ್ರೋತ್ಸಾಹ ಕೊಡುವ ಕೆಲಸಮಾಡಬೇಕು. ಅದನ್ನು ಬಿಟ್ಟು ವೈಯಕ್ತಿಕ ಟೀಕೆಗೆ ಮುಂದಾಗುತ್ತಾರೆ ಎಂದಿದ್ದಾರೆ” ಎಂದರು.
“ಈ ಕಾಲದಲ್ಲೂ ಈ ತರಹದ ಕೆಲಸ ಮಾಡಿದ್ದಾರೆ ಅಂದರೆ ನಂಬಕ್ಕಾಗಲ್ಲ. ಈ ಕಾಲದಲ್ಲೂ ಈ ರೀತಿ ನಡೆದಿರುವುದು ದೊಡ್ಡ ಅಪರಾಧ. ಎಲ್ಲಾ ಅಧಿಕಾರಿಗಳ ಜೊತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿ, ತಕ್ಕ ಶಿಕ್ಷೆಯಾಗಲಿ. ಅಧಿಕಾರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ” ಎಂದು ಹೇಳಿದರು.