Homeಕರ್ನಾಟಕಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಅವರಿಂದ ಜಾತಿ ಗಣತಿ ನಾಟಕ: ಕೇಂದ್ರ ಸಚಿವ ಕುಮಾರಸ್ವಾಮಿ

ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಅವರಿಂದ ಜಾತಿ ಗಣತಿ ನಾಟಕ: ಕೇಂದ್ರ ಸಚಿವ ಕುಮಾರಸ್ವಾಮಿ

ಜಾತಿ ಗಣತಿ ವರದಿಗೆ ಅರ್ಥವೇ ಇಲ್ಲ, ಕಾಂತರಾಜು ಆಯೋಗದ ವರದಿ ಸಿದ್ದ ಮಾಡಿ ಹತ್ತು ವರ್ಷಗಳೇ ಕಳೆದಿವೆ. ಜನರಲ್ಲಿ ಗ್ಯಾರಂಟಿ ವೈಫಲ್ಯ, ಭ್ರಷ್ಟಾಚಾರ, ದರ ಏರಿಕೆ ವಿರುದ್ಧ ಆಕ್ರೋಶ ಸ್ಫೋಟವಾಗುವ ಹಂತದಲ್ಲಿದೆ. ಹೀಗಾಗಿ ಜನರ ಗಮನ ಬೇರೆಡೆಗೆ ಹೊರಳಿಸಲು ಜಾತಿ ಗಣತಿ ಡ್ರಾಮಾ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಫ್ರೀಡಂ ಪಾರ್ಕ್ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಇವರು ಜಾತಿ ಗಣತಿ ಮಾಡಬೇಕಾದರೆ ಹೊಸದಾಗಿ ಸಮೀಕ್ಷೆ ಮಾಡಬೇಕು. ಹೊಸದಾಗಿ ನೀವು ವರದಿ ಕೊಡಬೇಕಾಗುತ್ತದೆ. ಹತ್ತು ವರ್ಷದಲ್ಲಿ ಬಹಳ ಬದಲಾವಣೆ ಆಗಿದೆ. ಈಗ ನೋಡಿದರೆ ಇವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಜಾತಿ ಜಾತಿ ಮಧ್ಯ ಸಂಘರ್ಷ ತರುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರಾಜ್ಯವನ್ನು ಸರ್ವನಾಶ ಮಾಡಲು ಹೊರಟಿದ್ದಾರೆ. ಜಾತ್ಯತೀತ ಎಂದು ಹೇಳಿಕೊಳ್ಳುವ, ಸಂವಿಧಾನ ಪ್ರತಿಯನ್ನು ಸದಾ ಕೈಯ್ಯಲ್ಲಿ ಹಿಡಿದು ಶೋ ಮಾಡುವ ಕಾಂಗ್ರೆಸ್ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ” ಎಂದು ಅವರು ವಾಗ್ದಾಳಿ ನಡೆಸಿದರು.

“ಜಾತಿ ಸಂಘರ್ಷಕ್ಕೆ ಏನೇನು ಮಾಡಬೇಕೋ ಅದಕ್ಕೆ ವೇದಿಕೆ ಸಿದ್ಧ ಮಾಡಲು ಸಿದ್ದರಾಮಯ್ಯ ಹೊರಟಿದ್ದಾರೆ. ಇವರು ಬಂದು ಎರಡು ವರ್ಷವಾಯಿತು. ಆವಾಗಿನಿಂದ ಯಾಕೆ ವರದಿ ಜಾರಿ ಮಾಡಲಿಲ್ಲ. ಕುರ್ಚಿ ಉಳಿಸಿಕೊಳ್ಳಬೇಕೆಂದು ಈ ಡ್ರಾಮಾ ಆರಂಭ ಮಾಡಿದ್ದಾರೆ” ಎಂದು ದೂರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments