Homeಕರ್ನಾಟಕಸಿದ್ರಾಮುಲ್ಲಾ ಖಾನ್ ಹೇಳಿಕೆ: ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಸಿದ್ರಾಮುಲ್ಲಾ ಖಾನ್ ಹೇಳಿಕೆ: ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಟೀಕಿಸಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿದ್ರಾಮುಲ್ಲಾ ಖಾನ್ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ಮುಂಡಗೊಡದಲ್ಲಿ ಭಾಷಣ ಮಾಡಿದ್ದರು. ಇದೀಗ ಅವರ ವಿರುದ್ಧ ಸುಮೋಟೋ‌ ಪ್ರಕರಣ ದಾಖಲಾಗಿದೆ.

ಅಯೋಧ್ಯೆ ರಾಮಮಂದಿರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅನಂತಕುಮಾರ್ ಹೆಗಡೆ, ‘ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ’ ಎಂದು ನಿಂದಿಸಿದ್ದರು.

ನಾನು ಅಯೋಧ್ಯೆಗೆ ಹೋಗುತ್ತೇನೆ, ಆದರೆ ಜ. 22 ಕ್ಕೆ ಹೋಗಲ್ಲ, ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಹೆಗಡೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ‌ ಎಫ್​ಐಆರ್​ ದಾಖಲಾಗಿತ್ತು.

ಇನ್ನು ಈ ಎಫ್​ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಅನಂತ್ ಕುಮಾರ್ ಹೆಗಡೆಗೆ ಹೈಕೋರ್ಟ್​ ತರಾಟೆಗೆ ತೆಗೆದುಕೊಂಡಿತ್ತು. ಮುಖ್ಯಮಂತ್ರಿ ವಿರುದ್ಧ ಈ ರೀತಿಯ ಪದ ಬಳಕೆ ಮಾಡಬಹುದೇ? ಅಭಿಪ್ರಾಯ ಭೇದವಿರಬಹುದು,‌ ನೀವು ಮತ ನೀಡದೇ ಇರಬಹುದು ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ಗೌರವಿಸದಿದ್ದರೆ ಹೇಗೆ? ಚುನಾವಣೆಯಲ್ಲಿ ಒಂದು ಪಕ್ಷ ಬರುತ್ತದೆ, ಹೋಗುತ್ತದೆ. ಪ್ರಜಾಪ್ರಭುತ್ವ ಕೆಲಸ ಮಾಡುವುದೇ ಹೀಗೆ. ಚುನಾವಣೆಯಲ್ಲಿ ಸೋಲಿಸಬಹುದು ಅದು ಬೇರೆ ವಿಚಾರ. ಭಾಷೆಯ ಬಳಕೆ ಗೌರವಯುತವಾಗಿರಬೇಕು. ಭಾಷೆ ಪ್ರಯೋಗ ಹಿಡಿತದಲ್ಲಿಡಲು” ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಸೂಚನೆ ನೀಡಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments