Homeಕರ್ನಾಟಕಸ್ಮೃತಿ ಇರಾನಿ ಭೇಟಿಯಾಗಿ 675 ಕೋಟಿ ರೂ. ಅನುದಾನಕ್ಕೆ ಮನವಿ ಮಾಡಿದ ಜಮೀರ್

ಸ್ಮೃತಿ ಇರಾನಿ ಭೇಟಿಯಾಗಿ 675 ಕೋಟಿ ರೂ. ಅನುದಾನಕ್ಕೆ ಮನವಿ ಮಾಡಿದ ಜಮೀರ್

ದೆಹಲಿ: ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಅಭಿವೃದ್ಧಿ ವಿಚಾರಗಳಿಗೆ ಅನುದಾನ ಕುರಿತು ಚರ್ಚಿಸಿದರು.

ಕರ್ನಾಟಕ ರಾಜ್ಯಕ್ಕೆ ಹೊಸದಾಗಿ 19 ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನ ಒದಗಿಸಲು ಕೇಂದ್ರ ಸಚಿವರಲ್ಲಿ ಜಮೀರ್ ಅಹಮದ್ ಖಾನ್ ಅವರು ಮನವಿ ಸಲ್ಲಿಸಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆ ಗಳಿಗೆ ಬೇಡಿಕೆ ಇದ್ದು 19 ಶಾಲೆ ಗಳಿಗೆ 475 ಕೋಟಿ ರೂ. ನೆರವು ಒದಗಿಸುವಂತೆ ಕೋರಿದರು. ಅದೇ ರೀತಿ 50 ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ ಒದಗಿಸಬೇಕು. 2.93 ಲಕ್ಷ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ವಿದ್ಯಾರ್ಥಿ ವೇತನ ಮೊತ್ತ ಬಿಡುಗಡೆ ಬಾಕಿ ಇದ್ದು ತಕ್ಷಣ ಬಿಡುಗಡೆ ಮಾಡಬೇಕು. 2023-24 ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯದ ಲ್ಲಿ ಇಲಾಖೆ ವತಿಯಿಂದ ರೂಪಿಸಿರುವ ಕಾರ್ಯಕ್ರಮ ಗಳ ಬಗ್ಗೆ ಕೇಂದ್ರ ಸಚಿವರಿಗೆ ಮಾಹಿತಿ ನೀಡಿದರು. ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments