Homeಕರ್ನಾಟಕದಕ್ಷಿಣ ಕೊರಿಯಾ | ಲ್ಯಾಂಡಿಂಗ್ ವೇಳೆ ವಿಮಾನ ಪತನ, 151 ಮಂದಿ ಮೃತ

ದಕ್ಷಿಣ ಕೊರಿಯಾ | ಲ್ಯಾಂಡಿಂಗ್ ವೇಳೆ ವಿಮಾನ ಪತನ, 151 ಮಂದಿ ಮೃತ

181 ಜನ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡ ಘಟನೆ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 151 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಜೆಜು ಏರ್ ಫ್ಲೈಟ್ 2,216 ಥೈಲ್ಯಾಂಡ್‌ನಿಂದ ಹಿಂದಿರುಗಿತ್ತು. ವಿಮಾನದಲ್ಲಿದ್ದ 181 ಜನರಲ್ಲಿ 175 ಮಂದಿ ಪ್ರಯಾಣಿಕರು ಮತ್ತು 6 ಮಂದಿ ವಿಮಾನ ಸಿಬ್ಬಂದಿ ಸೇರಿದ್ದಾರೆ. ಲ್ಯಾಂಡಿಂಗ್ ಗೇರ್‌ ಸಮಸ್ಯೆಯಿಂದ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲ್ಯಾಂಡಿಂಗ್ ವಿಫಲವಾದ ಬಳಿಕ ವಿಮಾನವು ನಿಲ್ದಾಣದ ತಡೆಗೋಡೆಗೆ ಅಪ್ಪಳಿಸಿದೆ. ಇದರಿಂದ ದೊಡ್ಡ ಸ್ಫೋಟ ಸಂಭವಿಸಿದೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಕ್ಕಿಗಳಿಗೆ ವಿಮಾನ ಡಿಕ್ಕಿಯಾದ ಪರಿಣಾಮ ಲ್ಯಾಂಡಿಂಗ್ ಗೇರ್ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಇದುವರೆಗೆ ಇಬ್ಬರನ್ನು ರಕ್ಷಿಸಲಾಗಿದೆ, 85 ಮಂದಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ, ಮೃತಪಟ್ಟವರಲ್ಲಿ 25 ಪುರುಷರು, 37 ಮಹಿಳೆಯರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments