Homeಕರ್ನಾಟಕಪ್ರತಿಭಟನೆಗಳಿಗೆ ಆಸ್ಪದ ನೀಡದೆ ಅರ್ಥಪೂರ್ಣವಾಗಿ ಚಳಿಗಾಲ ಅಧಿವೇಶನ ನಡೆಸಲು ಸಭಾಪತಿ ಸಲಹೆ

ಪ್ರತಿಭಟನೆಗಳಿಗೆ ಆಸ್ಪದ ನೀಡದೆ ಅರ್ಥಪೂರ್ಣವಾಗಿ ಚಳಿಗಾಲ ಅಧಿವೇಶನ ನಡೆಸಲು ಸಭಾಪತಿ ಸಲಹೆ

ಡಿ. 4ರಿಂದ 15ರ ವರೆಗೆ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನವನ್ನು ಅರ್ಥಪೂರ್ಣವಾಗಿ ನಡೆಸಲು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರಿಗೆ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೃಷಿ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಸಭಾಪತಿಗಳು, “ಅಧಿವೇಶನದ ಅತ್ಯಮೂಲ್ಯ ಸಮಯ ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ. ಈ ಬಗ್ಗೆ ಗಮನ ಹರಿಸಿ” ಎಂದು ತಿಳಿಸಿದ್ದಾರೆ.

“ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯ. ಈ ಹಿನ್ನೆಲೆಯಲ್ಲಿ ಅಧಿವೇಶನ ಆರಂಭಗೊಳ್ಳುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸಿ. ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಿಕೊಳ್ಳಿ” ಎಂದು ಸಲಹೆ ನೀಡಿದ್ದಾರೆ.

“ಸುವರ್ಣ ವಿಧಾನಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆಸಬಹುದು. ಈ ಮೂಲಕ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿದ್ದು, ಸಾರ್ಥಕವಾಗಿ ಸರ್ಕಾರಕ್ಕೆ ಗೌರವ ಹಾಗೂ ಒಳ್ಳೆಯ ಹೆಸರು ಬರುತ್ತದೆ” ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments