Homeಕರ್ನಾಟಕನರೇಗಾ ಬಗ್ಗೆ ವಿಶೇಷ ಚರ್ಚೆ | ಜ.22 ರಿಂದ ಜ.31ರವರೆಗೆ ಜಂಟಿ ಅಧಿವೇಶನ

ನರೇಗಾ ಬಗ್ಗೆ ವಿಶೇಷ ಚರ್ಚೆ | ಜ.22 ರಿಂದ ಜ.31ರವರೆಗೆ ಜಂಟಿ ಅಧಿವೇಶನ

  • ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು.

ಮುಖ್ಯಮಂತ್ರಿಗಳ ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.

ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ,ಅಮಾನತ್ತುಗೊಳಿಸಲಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments