Homeಕರ್ನಾಟಕಎಸ್‌ಎಸ್‌ಎಲ್‌ಸಿ ಪರೀಕ್ಷೆ | ರಾಜ್ಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆ | ರಾಜ್ಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

  • ವಿದ್ಯಾರ್ಥಿಗಳು ಕಲಿತ ಮೊರಾರ್ಜಿ ವಸತಿ ಶಾಲೆ ಅಭಿವೃದ್ಧಿಗೆ 1.50 ಕೋಟಿ ಅನುದಾನ
  • ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವು ಘೋಷಿಸಿದ ಸಿಎಂ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಹಾಗೂ ದ್ವಿತೀಯ ಸ್ಥಾನ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸನ್ಮಾನಿಸಿದರು.

ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿ, ಇಬ್ಬರೂ ಓದಿದ ಮೊರಾರ್ಜಿ ದೇಸಾಯಿ ಶಾಲೆಗಳ ಅಭಿವೃದ್ಧಿಗೆ ಒಂದೂವರೆ ಕೋಟಿ ರೂ. ಅನುದಾನದ ಘೋಷಣೆ ಮಾಡಿದರು.

ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ವುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು.

ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ತಿಳಿಸಿದರು.

ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯತೆ ಅರ್ಪಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994 ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಅವರು ಹೇಳಿದರು.

ನಿಮ್ಮ ಸಾಧನೆಯೇ ನನಗೆ ಪ್ರೇರಣೆ: ಕುಮಾರಿ ಅಂಕಿತ

ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರಿ ಅಂಕಿತ, “ಸಾರ್ ನಿಮ್ಮ ಸಾಧನೆಗಳು, ನಿಮ್ಮ ಮಾತುಗಳು ನನ್ನ ಈ ಯಶಸ್ಸಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿದವು” ಎಂದು ತಿಳಿಸಿದರು.

ಮುಂದೆ ಐಎಎಸ್ ಅಧಿಕಾರಿ ಆಗಬೇಕೆಂಬ ಬಯಕೆಯನ್ನು ಅಂಕಿತಾ ವ್ಯಕ್ತಪಡಿಸಿದರು. ಪಿಯುಸಿ ದಾಖಲಾತಿ ಸೇರಿದಂತೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವು ಒದಗಿಸುವುದಾಗಿ ಸಿಎಂ ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments