2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ (SSLC Result 2026) ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟವಾಗಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು.
ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.
ಮೂವರು ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದೆ.


