Homeಕರ್ನಾಟಕಕಾಲ್ತುಳಿತ | ಬೆಂಗಳೂರು ಪೊಲೀಸ್ ಕಮಿಷನರ್ ಸೇರಿ ನಾಲ್ಕು ಅಧಿಕಾರಿಗಳ ಅಮಾನತು

ಕಾಲ್ತುಳಿತ | ಬೆಂಗಳೂರು ಪೊಲೀಸ್ ಕಮಿಷನರ್ ಸೇರಿ ನಾಲ್ಕು ಅಧಿಕಾರಿಗಳ ಅಮಾನತು

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದಿಂದ 11 ಮಂದಿ ಬಲಿಯಾಗಿದ್ದು, 47 ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ 4 ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ‌ಸಭಾಂಗಣದಲ್ಲಿ ಸುದ್ದಿಗೋಷ್ಠಿ ಈ ಬಗ್ಗೆ ಮಾಹಿತಿ ನೀಡಿದರು.

“ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದುಃಖಕರವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಿದ್ದು, ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ” ಎಂದರು.

“ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ” ಎಂದು ಹೇಳಿದರು.

“ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ” ಎಂದು ತಿಳಿಸಿದರು.

“ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ” ಎಂದರು.

“ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ” ಎಂದು ಹೇಳಿದರು.

ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments