Homeಕರ್ನಾಟಕಕಾಲ್ತುಳಿತ | ಐಪಿಎಸ್ ವಿಕಾಸ್‌ ಅಮಾನತು ರದ್ದು ಪ್ರಶ್ನಿಸಿ ಸರ್ಕಾರದಿಂದ ಹೈಕೋರ್ಟ್‌ಗೆ ಮೇಲ್ಮನವಿ

ಕಾಲ್ತುಳಿತ | ಐಪಿಎಸ್ ವಿಕಾಸ್‌ ಅಮಾನತು ರದ್ದು ಪ್ರಶ್ನಿಸಿ ಸರ್ಕಾರದಿಂದ ಹೈಕೋರ್ಟ್‌ಗೆ ಮೇಲ್ಮನವಿ

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿದ್ದ ವಿಕಾಸ್‌ ಕುಮಾರ್‌ ಅಮಾನತನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರದ್ದು ಮಾಡಿರುವ ಕ್ರಮವನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ತುರ್ತು ವಿಚಾರಣೆ ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ಪ್ರಕರಣವನ್ನು ನ್ಯಾಯಮೂರ್ತಿಗಳಾದ ಎಸ್‌ ಜಿ ಪಂಡಿತ್‌ ಮತ್ತು ಟಿ ಎಂ ನದಾಫ್‌ ಅವರ ವಿಭಾಗೀಯ ಪೀಠದ ಮುಂದೆ ಉಲ್ಲೇಖಿಸಿ, ತುರ್ತಾಗಿ ಅರ್ಜಿ ವಿಚಾರಣೆ ನಡೆಸಬೇಕು ಎಂದು ಕೋರಿದರು.

ಕರ್ನಾಟಕ ಸರ್ಕಾರದ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಆದೇಶದ ಕಾರಣ ಅಧಿಕಾರ ವಹಿಸಿಕೊಳ್ಳಲು ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸರ್ಕಾರಕ್ಕೆ ಸೂಚಿಸಿ, ನಾಳೆ ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿತು.

ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತದ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಸರ್ಕಾರ, ಆಗಿನ ಪೊಲೀಸ್ ಆಯಕ್ತ ಬಿ ದಯಾನಂದ್, ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಸೇರಿದಂತೆ ಹಲವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು.

ಇದರ ವಿರುದ್ಧ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು. ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೋರಿತ್ತು. ನಂತರ ನ್ಯಾಯಮೂರ್ತಿ ಬಿ ಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿ, ಮಂಗಳವಾರ ಸರ್ಕರದ ನಿರ್ಧಾರವನ್ನು ರದ್ದುಪಡಿಸಿ ಆದೇಶ ನೀಡಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments