Homeಕರ್ನಾಟಕರಾಜ್ಯ ಬಜೆಟ್ | 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಸಿಎಂ ಘೋಷಣೆ

ರಾಜ್ಯ ಬಜೆಟ್ | 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಸಿಎಂ ಘೋಷಣೆ

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆ ಮತ್ತು ಅದು ಉಂಟು ಮಾಡುತ್ತಿರುವ ದುಷ್ಪರಿಣಾಮಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿದೆ.

ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮದ ಬಗ್ಗೆ ಪ್ರಸ್ತಾಪ ಮಾಡಲಾಗಿದ್ದು,. ಅಡ್ಡ ಪರಿಣಾಮಗಳ ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸಲಾಗುವುದು ಎಂದು ಉಲ್ಲೇಖ ಮಾಡಲಾಗಿದೆ.

ಇದು ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಏಳಿಗೆಯ ದೃಷ್ಟಿಯಿಂದ ಒಳ್ಳೆಯ ತೀರ್ಮಾನವಾಗಿದ್ದು, ಕೇಂದ್ರ ಸರ್ಕಾರದ ಆರ್ಥೀಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments