Homeಕರ್ನಾಟಕರಾಜ್ಯ ಬಜೆಟ್‌ | ಅಲ್ಪ ಸಂಖ್ಯಾತರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ

ರಾಜ್ಯ ಬಜೆಟ್‌ | ಅಲ್ಪ ಸಂಖ್ಯಾತರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ತಮ್ಮ ದಾಖಲೆಯ 16ನೇ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಮೂಲಸೌಕರ್ಯ ಕಲ್ಪಿಸಲು 1 ಸಾವಿರ ಕೋಟಿ ರೂ. ಅನುದಾನ ನೀಡಿದ್ದಾರೆ.

ಜೈನ, ಬೌದ್ಧ ಹಾಗೂ ಸಿಖ್ ಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಘೋಷಿಸಿದ್ದು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಿಎಂ ಕೊಟ್ಟಿದ್ದೇನು?

  • ಪ್ರಸ್ತುತ 250 ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ. ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ.
  • ಆಯ್ದ 100 ಉರ್ದು ಮಾಧ್ಯಮದ ಶಾಲೆಗಳನ್ನು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು 100 ಕೋಟಿ ರೂ.
  • ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳಿಗಾಗಿ 1 ಸಾವಿರ ಕೋಟಿ ರೂ. ಅನುದಾನ.
  • ಮದರಸಾಗಳಲ್ಲಿನ ವಿದ್ಯಾರ್ಥಿಗಳು NIOS ಮೂಲಕ SSLC ಪರೀಕ್ಷೆ ಬರೆಯಲು ಸಿದ್ದತೆಗೆ ನೆರವು.
  • ವಕ್ಪ್ ಸಂಸ್ಥೆ ಆಸ್ತಿಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ.
  • ರಾಜ್ಯದಲ್ಲಿರುವ ಗುರುದ್ವಾರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು 2 ಕೋಟಿ ರೂ. ಅನುದಾನ.
  • 169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ.
  • ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಳ ವೆಚ್ಚಗಳಿಗೆ ಪ್ರತಿ ಜೋಡಿಗೆ 50ಸಾವಿರ ರೂ. ಸಹಾಯಧನ.
  • ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಹಾಗೂ ಮಹಾಭೋಧಿ ಅಧ್ಯಯನ ಕೇಂದ್ರದ ಹಳೆಯ ಗ್ರಂಥಾಲಯ 1 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣ.
  • ಅಲ್ಪಸಂಖ್ಯಾತ ಮಹಿಳೆಯರಿಗಾಗಿ 16 ಹೊಸ ಮಹಿಳಾ ಕಾಲೇಜುಗಳ ಸ್ಥಾಪನೆ.
  • ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ
  • ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗಾಗಿ 250 ಕೋಟಿ ರೂ. ಅನುದಾನ.
  • ಜೈನ ಅರ್ಚಕರು, ಸಿಖ್ಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್‌ಗಳ ಮಾಸಿಕ ಗೌರವಧನ 6 ಸಾವಿರ ರೂ. ಗಳಿಗೆ ಹೆಚ್ಚಳ. ಸಿಖ್ಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ ಗಳ ಮಾಸಿಕ ಗೌರವಧನ 5 ಸಾವಿರ ರೂ.ಗಳಿಗೆ ಹೆಚ್ಚಳ.
  • ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಲ್ಲಿ ಶೇ. 50 ಪ್ರವೇಶ ಶುಲ್ಕ ಮರುಪಾವತಿಗೆ ಕ್ರಮ.
  • ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 30 ಲಕ್ಷ ರೂ.ಗಳಿಗೆ ಹೆಚ್ಚಳ.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments