ಕರ್ನಾಟಕ ಸರ್ಕಾರವು ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಗಣರಾಜ್ಯೋತ್ಸವ ದಿನದಂದೇ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಒಟ್ಟು 34 ಶಾಸಕರಿಗೆ ಮಣೆ ಹಾಕಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಭರ್ಜರಿ ತಯಾರಿ ನಡೆಸಿದ್ದು, ಸರ್ಕಾರ ಬಂದು ಎಂಟು ತಿಂಗಳು ಕಳೆದರೂ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಕಾರ್ಯಕರ್ತರಿಗೆ ಹುದ್ದೆಗಳನ್ನು ಕೊಟ್ಟಿಲ್ಲ ಎಂಬ ಅಸಮಾಧಾನ ಕಾಂಗ್ರೆಸ್ ಪಾಳಯದಲ್ಲಿ ಕೇಳಿಬಂದಿತ್ತು.
ಭುಗಿಲೆದ್ದ ಆಕ್ರೋಶದ ನಡುವೆಯೇ ಗಣರಾಜ್ಯೋತ್ಸವದಂದು ನಿಗಮ, ಮಂಡಳಿ ಪಟ್ಟಿಯು ಬಿಡುಗಡೆಗೊಂಡಿದೆ. ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಹಲವು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಅಲ್ಲದೆ, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಹೀಗಿದೆ