Homeಕರ್ನಾಟಕರಾಜ್ಯದಲ್ಲಿ ಚುನಾಯಿತ ಸರ್ಕಾರ ಇಲ್ಲ: ಬಿ ವೈ ವಿಜಯೇಂದ್ರ ಟೀಕೆ

ರಾಜ್ಯದಲ್ಲಿ ಚುನಾಯಿತ ಸರ್ಕಾರ ಇಲ್ಲ: ಬಿ ವೈ ವಿಜಯೇಂದ್ರ ಟೀಕೆ

ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರ್ಕಾರ ಇದೆ ಎಂದು ಅನಿಸುತ್ತಿಲ್ಲ. ಕಾಂಗ್ರೆಸ್‌ ಅನೇಕ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಆದರೆ, ಕಳೆದ 14 ತಿಂಗಳಿನಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಿದೆ, ಹಾಲಿನ ದರ ಹೆಚ್ಚಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದರು.

ನಾಲ್ಕನೇ ದಿನದ ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಮಾತನಾಡಿ, “ಭ್ರಷ್ಟ ಕಾಂಗ್ರೆಸ್ ಸರ್ಕಾರ ಮತ್ತು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕಿತ್ತೆಸೆಯಬೇಕಕು ಎಂಬ ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ” ಎಂದು ತಿಳಿಸಿದರು.

“ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ” ಎಂದರು.

“ಸಿದ್ದರಾಮಯ್ಯನವರು ರೈತರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ 1200 ಕೋಟಿ ರೂ. ಹಾಗೇ ಉಳಿಸಿಕೊಂಡಿದ್ದಾರೆ. ನೋಂದಣಿ ಶುಲ್ಕ ಹೆಚ್ಚಾಗಿದೆ. ಅಕ್ಕಿ, ದವಸ ಧಾನ್ಯವೂ ದುಬಾರಿಯಾಗಿದೆ. 1 ಲಕ್ಷ 95 ಸಾವಿರ ಕೋಟಿ ಸಾಲವನ್ನು ಸಿದ್ದರಾಮಯ್ಯನವರ ಸರ್ಕಾರ ಮಾಡಿದೆ” ಎಂದು ಟೀಕಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments