ರಾಜ್ಯ ಸರ್ಕಾರ ಕೊಡುವ 2023ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ 30 ಅಧಿಕಾರಿ/ನೌಕರರಿಗೆ ಲಭಿಸಿದೆ.
2012ರಿಂದ ಅತ್ಯುನ್ನತ ಸೇವೆಗೈದ/ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಸರ್ಕಾರ ನೀಡುತ್ತಾ ಬಂದಿದೆ.
18-03-2023ರಂದು ರಾಜ್ಯ ಸರ್ಕಾರದ ಅಧಿಕಾರಿ ನೌಕರರಿಗೆ ರಾಜ್ಯ ಮಟ್ಟ ಮತ್ತು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆನ್ ಲೈನ್ ಮುಖಾಂತರ ಸ್ವತಃ ನಾಮನಿರ್ದೇಶನ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಆಯ್ಕೆ ಸಮಿತಿ ಸಭೆಯು ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಸಲ್ಲಿಸಿರುವ ಎಲ್ಲ ಅರ್ಹ ನಾಮನಿರ್ದೇಶನಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಅಂತಿಮವಾಗಿ 30 ಅರ್ಹ ಅಧಿಕಾರಿ/ ನೌಕರರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ.
19-03-2022ರಲ್ಲಿ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಹಲವು ಮಾರ್ಪಾಡುಗಳೊಂದಿಗೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿ, ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಳ ಸಂಖ್ಯೆಯನ್ನು 30ಕ್ಕೆ ಏರಿಸಲಾಗಿದೆ. ಜಿಲ್ಲಾ ಪ್ರಶಸ್ತಿ ಮೊತ್ತವನ್ನು 10,000 ರೂ. ದಿಂದ 25,000 ರೂ.ಗೆ ಮತ್ತು ರಾಜ್ಯ ಪ್ರಶಸ್ತಿ ಮೊತ್ತವನ್ನು 25,000 ರೂ. ದಿಂದ 50,000 ರೂ.ಗೆ ಏರಿಸಲಾಗಿದೆ.
2023ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಗೊಂಡಿರುವ ಪುರಸ್ಕೃತರು.