Homeಕರ್ನಾಟಕಮೊದಲ ಬಾರಿಗೆ‌ ಸಿಎಂ ಸಿದ್ದರಾಮಯ್ಯರಿಂದ ನಾಳೆ (ಫೆ.8) ವಿಧಾನಸೌಧ ಮುಂದೆ ರಾಜ್ಯ ಮಟ್ಟದ ‘ಜನಸ್ಪಂದನ’

ಮೊದಲ ಬಾರಿಗೆ‌ ಸಿಎಂ ಸಿದ್ದರಾಮಯ್ಯರಿಂದ ನಾಳೆ (ಫೆ.8) ವಿಧಾನಸೌಧ ಮುಂದೆ ರಾಜ್ಯ ಮಟ್ಟದ ‘ಜನಸ್ಪಂದನ’

ಇದೇ ಮೊದಲ ಬಾರಿಗೆ ವಿಧಾನಸೌಧ ಮುಂಭಾಗದಲ್ಲಿ ರಾಜ್ಯ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಲಿದ್ದಾರೆ.

ಗುರುವಾರ (ಫೆಬ್ರವರಿ 8) ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಈ ಜನತಾ ದರ್ಶನ ನಡೆಯಲಿದೆ.

ಸ್ಪಂದನಶೀಲ ಆಡಳಿತದ ಭರವಸೆಯನ್ನು ಗಟ್ಟಿಗೊಳಿಸುವ ಪ್ರಯತ್ನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸಾಮಾನ್ಯರ ಅಹವಾಲು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಪ್ರಯತ್ನದೊಂದಿಗೆ ರಾಜ್ಯ ಮಟ್ಟದ ಈ ಜನತಾ ದರ್ಶನವನ್ನು ಶಕ್ತಿ ಕೇಂದ್ರ ವಿಧಾನಸೌಧದ ಮುಂಭಾಗ ನಡೆಸುತ್ತಿರುವುದು ವಿಶೇಷವಾಗಿದೆ.

ಇದು 2ನೇ ಜನಸ್ಪಂದನ ಕಾರ್ಯಕ್ರಮ

ಸಿಎಂ ಸಿದ್ದರಾಮಯ್ಯ ಅವರು ನಡೆಸುತ್ತಿರುವ 2ನೇ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ಇದಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮೊದಲ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದು, ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ್ದರು. ಅಲ್ಲದೇ ಜನರ ಸಮಸ್ಯೆಗಳನ್ನು ಆಲಿಸಿ ಆಯಾ ಇಲಾಖೆ, ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದ್ದರು.

ನಾಳೆ ಎರಡನೇ ಜನಸ್ಪಂದನ ನಡೆಸಲಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಮತ್ತು ಸರಕಾರದ ವರ್ಚಸ್ಸು ಹೆಚ್ಚಿಸಿ, ಜನಪರ ಮತ್ತು ಸ್ಪಂದನಶೀಲ ಆಡಳಿತದ ವಿಶ್ವಾಸವನ್ನು ಜನರಲ್ಲಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

36 ವಿವಿಧ ಇಲಾಖೆಗಳ ಪ್ರತ್ಯೇಕ ಕೌಂಟರ್

ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕಾಗಿ ವಿಧಾನಸೌಧ ಪೂರ್ವಭಾಗದ ಮೆಟ್ಟಿಲುಗಳ ಬಳಿ ಭರ್ಜರಿ ಸಿದ್ಧತೆ ನಡೆದಿದೆ. ರಾಜ್ಯದ ನಾನಾ ಭಾಗಗಳಿಂದ ಜನರು ಅಹವಾಲು ಹೊತ್ತು ತರುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ವತಿಯಿಂದ ತಯಾರಿ ಮಾಡಿಕೊಳ್ಳಲಾಗಿದೆ.

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗ ಸಿಎಂ ಜನಸ್ಪಂದನಕ್ಕೆ ಬೃಹತ್ ಜರ್ಮನ್ ಟೆಂಟ್ ಹಾಕಲಾಗಿದೆ. ಹಾಗೇ 20 ಬೃಹತ್ ಎಲ್ ಇಡಿ ಸ್ಕ್ರೀನ್ ಅಳವಡಿಕೆ ಮಾಡಲಾಗಿದೆ. ಇನ್ನು 10 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 36 ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಕೌಂಟರ್ ಓಪನ್ ಮಾಡಲಾಗಿದ್ದು, ಕೌಂಟರ್ ಗಳಲ್ಲಿ ಆಯಾ ಇಲಾಖೆಯ ಹಿರಿಯ ಅಧಿಕಾರಿಗಳೇ ಸಾರ್ವಜನಿಕ ಮನವಿ ಸ್ವೀಕರಿಸಲಿದ್ದಾರೆ. ಜೊತೆಗೆ ಸಿಎಂ‌ ಸಿದ್ದರಾಮಯ್ಯನವರೇ ಖುದ್ದು ಆ ಕೌಂಟರ್ ಗಳಿಗೆ ತೆರಳಿ ಅರ್ಜಿ ಪರಿಶೀಲನೆ ನಡೆಸಲಿದ್ದಾರೆ.

1902 ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ

ಎಲ್ಲ ಇಲಾಖೆಯ ಹಿರಿಯ ಅಧಿಕಾರಿಗಳು ಜನಸ್ಪಂದನ ಕಾರ್ಯಕ್ರಮದ ಸ್ಥಳದಲ್ಲೇ ಇರುವಂತೆ ಈಗಾಗಲೇ ಸಿಎಂ ಸೂಚನೆ ನೀಡಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಯನ್ನು ಸಿಎಂ ಬಳಿ ಹೇಳಿಕೊಳ್ಳಲು ಅಧಾರ್ ಅಥವಾ ಪಡಿತರ ಕಾರ್ಡ್ ನೊಂದಿಗೆ ಆಗಮಿಸಿ ನೋಂದಣಿ ಮಾಡಿಕೊಳ್ಳಬೇಕು. ಹಾಗೇ ಅನ್ ಲೈನ್ ನಲ್ಲೂ ನೋಂದಾಣಿ ಮಾಡಿಕೊಳ್ಳಬಹುದು. 1902 ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಬಹುದು.

ಮುಖ್ಯವಾಗಿ ಜನಸ್ಪಂದನಕ್ಕೆ ಆಗಮಿಸುವ ಸಾರ್ವಜನಿಕರಿಗೆ ಲಘು ಉಪಾಹಾರ ಮತ್ತು ನೀರನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಜನಸ್ಪಂದನಕ್ಕೆ ಬರುವ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಸಹ ಇರಲಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ವಿಧಾನಸೌಧಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments