ಕೋಲಾರ: ಸಾರ್ವಜಿನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ತಾಲ್ಲೂಕು ಕಚೇರಿಗೆ ಲೋಕಾಯುಕ್ತ ಪೊಲೀಸರು ದಿಢೀರ್ ಭೇಟಿ ನೀಡಿದ್ದಾರೆ.
ಇಲ್ಲಿನ ಮಿನಿ ವಿಧಾನಸೌಧ ದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲ್ಲೂಕು ಕಚೇರಿಯಲ್ಲಿ ಅಕ್ರಮ ಹಾಗೂ ಲಂಚ ಕೊಟ್ಟರೆ ಮಾತ್ರ ಕೆಲಸ ಮಾಡಿಕೊಡುತ್ತಾರೆಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಕೋಲಾರ ಲೋಕಾಯುಕ್ತಾ ಪೊಲೀಸರು ದಿಢೀರ್ ಭೇಟಿ ನೀಡಿ ದಾಖಲೆಗಳ ಪರಶೀಲನೆ ನಡೆಸಿದರು.
ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ಹಾಗೂ 20 ಮಂದಿ ಪೋಲೀಸರ ತಂಡ ಕಡತಗಳ ಪರಿಶೀಲನೆ ನಡೆಸಿತು. ತಹಶೀಲ್ದಾರ್ ಹರ್ಷವರ್ಧನ್ ಸೇರಿದಂತೆ ಹಲವು ಅಧಿಕಾರಿಗಳ ಬಳಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ.
ತಾಲ್ಲೂಕು ಕಚೇರಿಯಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ, ಪಹಣಿ ಸಮಸ್ಯೆ, ಗೋಮಾಳ ಜಮೀನು ಒತ್ತುವರಿ ಅಲ್ಲದೇ ಹೇರಳ ಭ್ರಷ್ಟಾಚಾರ ನಡೆಯುತ್ತಿದೆಯೆಂದು ಲೋಕಾಯುಕ್ತರಿಗೆ ಬಂದಿದ್ದ ದೂರುಗಳನ್ನಾಧರಿಸಿ ಲೋಕಾಯುಕ್ತ ಪೊಲೀಸರು ದೌಡಾಯಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.