Homeಕರ್ನಾಟಕಪೊಲೀಸ್‌ ಇಲಾಖೆಯಲ್ಲಿ ಸರ್ಜರಿ; ಐದು ವರ್ಷ ಒಂದೇ ಕಡೆ ಇರುವ ಸಿಬ್ಬಂದಿಗೆ ಕೂಡಲೇ ವರ್ಗಾವಣೆ

ಪೊಲೀಸ್‌ ಇಲಾಖೆಯಲ್ಲಿ ಸರ್ಜರಿ; ಐದು ವರ್ಷ ಒಂದೇ ಕಡೆ ಇರುವ ಸಿಬ್ಬಂದಿಗೆ ಕೂಡಲೇ ವರ್ಗಾವಣೆ

ಐದು ವರ್ಷಗಳ ಸೇವೆಯನ್ನು ಒಂದೇ ಸ್ಥಳದಲ್ಲಿ ಪೂರೈಸಿರುವ ಪಿ.ಸಿ. ಹೆಚ್.ಸಿ ಹಾಗೂ ಎ.ಎಸ್.ಐ ಅವರನ್ನು ಕೂಡಲೇ ವರ್ಗಾವಣೆ ಮಾಡಲು ಪೊಲೀಸ್‌ ಇಲಾಖೆ ಸೂಚಿಸಿದೆ.

ಎಲ್ಲ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಸಿ, ಹೆಚ್.ಸಿ. ಎಎಸ್‌ಐ ರವರ ಕನಿಷ್ಟ ಮತ್ತು ಗರಿಷ್ಟ ಅವಧಿಯನ್ನು ನಿಗಧಿಪಡಿಸಲಾಗಿದೆ. ಆದಾಗ್ಯೂ ಹಲವಾರು ಘಟಕಗಳಲ್ಲಿ ಸಿಬ್ಬಂದಿಗಳು ಒಂದೇ ಸ್ಥಳ/ ಠಾಣೆಯಲ್ಲಿ 5 ವರ್ಷಗಳಿಗೂ ಮೇಲ್ಪಟ್ಟು ಕರ್ತವ್ಯ ನಿರ್ವಹಿಸುತ್ತಿರುವುದು ಕಂಡು ಬಂದಿದೆ. ಹಾಗೆಯೇ ವರ್ಗಾವಣೆ ನಂತರ ಪುನಃ ಅದೇ ಠಾಣೆಗಳಿಗೆ ಓಓಡಿ ಆಧಾರದ ಮೇಲೆ ಸ್ಥಳನಿಯುಕ್ತಿಗೊಳಿಸುತ್ತಿರುವುದು ಕಂಡು ಬಂದಿರುತ್ತದೆ.

ಈ ಹಿನ್ನೆಲೆಯಲ್ಲಿ ದಿನಾಂಕ: 06.07.2024 ರಂದು ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಸೂಚನೆಯನ್ವಯ ತಮ್ಮ ಘಟಕಗಳಲ್ಲಿ ಒಂದೇ ಸ್ಥಳ/ ಠಾಣೆಗಳಲ್ಲಿ 5 ವರ್ಷ ಸೇವೆ ಸಲ್ಲಿಸಿರುವ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯಿಂದ ಪೊಲೀಸ್ ಸಬ್ ಇನ್ಸ್‌ಪೆಕ್ಟ‌ರ್ ಹುದ್ದೆಯವರೆಗಿನ ಅಧಿಕಾರಿ/ಸಿಬ್ಬಂದಿಗಳನ್ನು ಕೂಡಲೇ ಬೇರೆ ಠಾಣೆ/ ಸ್ಥಳಗಳಿಗೆ ಬದಲಾವಣೆ ಮಾಡಲು ಸೂಚಿಸಲಾಗಿದೆ.

ಯಾವುದೇ ಕಾರಣಕ್ಕೂ ಅಂತಹ ಸಿಬ್ಬಂದಿಗಳನ್ನು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿಯೇ ಮುಂದುವರೆಸತಕ್ಕದ್ದಲ್ಲ ಎಂದು ಆದೇಶದ ಮೂಲಕ ತಿಳಿಸಲಾಗಿದೆ. ಈ ಕುರಿತಂತೆ ಕೈಗೊಂಡ ಕ್ರಮದ ಮಾಹಿತಿಯನ್ನು 7 ದಿನಗಳ ಒಳಗಾಗಿ ಈ ಕಚೇರಿಗೆ ಕಳುಹಿಸುವಂತೆ ಸೂಚಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments