Homeಕರ್ನಾಟಕಜು.16ಕ್ಕೆ ಸುರ್ಜೆವಾಲಾ ಆಗಮನ, ಅಂದೇ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ: ಸಿಎಂ

ಜು.16ಕ್ಕೆ ಸುರ್ಜೆವಾಲಾ ಆಗಮನ, ಅಂದೇ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ: ಸಿಎಂ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಜೊತೆಯಲ್ಲಿ ನಾನು ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮಾತುಕತೆ ನಡೆಸಿದ್ದೇವೆ. ನಿಗಮ-ಮಂಡಳಿಗಳಿಗೆ ನಮ್ಮ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಕುರಿತು ಚರ್ಚೆ ಮಾಡಿದ್ದೇವೆ, ಆದರೆ ನೇಮಕ ಪ್ರಕ್ರಿಯೆ ಪೂರ್ಣವಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರೊಗೆ ಹೊರಡುವ ಮುನ್ನ ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಜುಲೈ 16ರಂದು ಸುರ್ಜೆವಾಲಾ ಅವರು ಮತ್ತೊಮ್ಮೆ ಬೆಂಗಳೂರಿಗೆ ಬರುತ್ತಾರೆ. ಅಂದು ನಾವು ಎಲ್ಲ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕವನ್ನು ಅಂತಿಮಗೊಳಿಸುತ್ತೇವೆ” ಎಂದರು.

“ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಈ ಬಗ್ಗೆ ಈಗಾಗಲೇ ನಮ್ಮ ಹೈಕಮಾಂಡ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲರೂ ಸ್ಪಷ್ಟನೆ ನೀಡಿದ್ದಾರೆ” ಎಂದು ಪುನಃ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸದ್ಯ 32 ನಿಗಮ ಮಂಡಳಿಗಳಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ನೇಮಿಸಬೇಕಿದೆ. ಈಗಾಗಲೇ 35 ನಿಗಮ ಮಂಡಳಿಗಳಿಗೆ ಮೊದಲ ಹಂತದಲ್ಲಿ ಶಾಸಕರನ್ನು ನೇಮಕ ಮಾಡಲಾಗಿದೆ. ಎರಡನೇ ಹಂತದಲ್ಲಿ 40 ನಿಗಮ ಮಂಡಳಿಗಳಿಗೆ ಪಕ್ಷದ ಮುಖಂಡರನ್ನು ನೇಮಿಸಲಾಗಿದೆ.

ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳ ನಾಮನಿರ್ದೇಶನದ ವಿಷಯದಲ್ಲಿ ಮತ್ತೆ ಹೈಕಮಾಂಡ್‌ ಮತ್ತು ರಾಜ್ಯ ನಾಯಕರ ನಡವೆ ಸಹಮತ ಏರ್ಪಟ್ಟಿಲ್ಲ. ಹಿರಿಯ ಮುಖಂಡ ಬಿ.ಎಲ್.ಶಂಕರ್ ಅಥವಾ ಮುಖಂಡ ವಿನಯ್ ಕಾರ್ತಿಕ್ ಪೈಕಿ ಒಬ್ಬರಿಗೆ ಅವಕಾಶ ಕಲ್ಪಿಸಬೇಕು’ ಎಂದು ಡಿ.ಕೆ. ಶಿವಕುಮಾ‌ರ್ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments