ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ ಸೋಮವಾರ (ಜು.22) 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ ಸೂಚಿಸಿದ ನಂತರ ಸದನದಲ್ಲೂ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಲಾಗುವುದು ಅಂತ ಸ್ಪಷ್ಟಪಡಿಸಿದ್ದ ಬೆನ್ನಲ್ಲೇ ಇಂದು ಆದೇಶ ಹೊರಬಿದ್ದಿದೆ.
ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ದಿನಾಂಕ 19.11.2022ರ ಆದೇಶದಲ್ಲಿ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿದ್ದು, 7ನೇ ರಾಜ್ಯ ವೇತನ ಆಯೋಗದ ಸಂಪುಟ- ರ ವರದಿಯಲ್ಲಿನ ಶಿಫಾರಸ್ಸುಗಳನ್ನು ಸರ್ಕಾರವು ಪರಿಗಣಿಸಿ ಆದೇಶ ಹೊರಡಿಸಲಾಗಿದೆ.
7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ದಿನಾಂಕ: 01.07.2022ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲು ಸರ್ಕಾರವು ಹರ್ಷಿಸುತ್ತದೆ ಎಂದು ತಿಳಿಸಲಾಗಿದೆ.
ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದ್ದು, ಅದರಂತೆ, ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯ ಪ್ರಸ್ತುತ ಮೊತ್ತವನ್ನು ಕ್ರಮವಾಗಿ ಮಾಸಿಕ ರೂ.8,500/- ಮತ್ತು ರೂ.75,300/- ರಿಂದ ರೂ.13,500/- ಮತ್ತು ರೂ.1,20,600/- ಗಳಿಗೆ ಮತ್ತು ಸಂವಾದಿ ಕುಟುಂಬ ಪಿಂಚಣಿಯ ಕನಿಷ್ಠ ಮತ್ತು ಗರಿಷ್ಠ ಮಿತಿಯನ್ನು ಅನುಕ್ರಮವಾಗಿ ಮಾಸಿಕ ರೂ.8,500/- ಮತ್ತು ರೂ.45,180/- ರಿಂದ ಮತ್ತು ರೂ.13,500/- ಮತ್ತು ರೂ.80,400/-ಗಳಿಗೆ ಪರಿಷ್ಕರಿಸತಕ್ಕದ್ದು. ಪರಿಷ್ಕೃತ ಪಿಂಚಣಿ ಮತ್ತು ಕುಟುಂಬ ಪಿಂಚಣಿಗಳು ದಿನಾಂಕ: 01.07.2022 ರಿಂದ ಜಾರಿಗೆ ಬರುತ್ತವೆ. ಆದರೆ, ಪಿಂಚಣಿ ಪರಿಷ್ಕರಣೆಯ ಆರ್ಥಿಕ ಲಾಭವು ದಿನಾಂಕ: 01.08.2024 ರಿಂದ ಪ್ರಾಪ್ತವಾಗತಕ್ಕದ್ದು. ಮರಣ ಮತ್ತು ನಿವೃತ್ತಿ ಉಪದಾನದ ಪ್ರಸ್ತುತ ಗರಿಷ್ಠ ಮಿತಿ ರೂ.20 ಲಕ್ಷಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಸರ್ಕಾರದ ಆದೇಶ ಪ್ರತಿ ಇಲ್ಲಿದೆ..