HomeSportಟಿ20 ವಿಶ್ವಕಪ್ | ಚರಿತ್ರೆ ಸೃಷ್ಟಿಸಿದ ಭಾರತ, 3ನೇ ಬಾರಿ ಚಾಂಪಿಯನ್

ಟಿ20 ವಿಶ್ವಕಪ್ | ಚರಿತ್ರೆ ಸೃಷ್ಟಿಸಿದ ಭಾರತ, 3ನೇ ಬಾರಿ ಚಾಂಪಿಯನ್

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಎದುರಾಳಿ ತಂಡಕ್ಕೆ 256 ರನ್ ಗಳ ಅತ್ಯಧಿಕ ರನ್ ಟಾರ್ಗೆಟ್ ನೀಡಿತ್ತು. ಭಾರತದ ಪರ ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಭಾರತ ಬೃಹತ್ ಮೊತ್ತ ಗಳಿಸಲು ಸಾಧ್ಯವಾಯಿತು.

ಬೃಹತ್ ರನ್ ಚೇಸಿಂಗ್ ಗೆ ಇಳಿದ ನ್ಯೂಜಿಲ್ಯಾಂಡ್ ತಂಡ 100 ರನ್ ಗಳನ್ನು ಗಳಿಸುವ ಮುನ್ನವೇ ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿತು. ಅಂತಿಮವಾಗಿ ಭಾರತದ ಎದುರು ನ್ಯೂಜಿಲ್ಯಾಂಡ್ ಇನ್ನೂ ಒಂದು ಓವರ್ ಬಾಕಿ ಇರುವಾಗಲೇ 159 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.

ಭಾರತ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಲವು ದಾಖಲೆ ಬರೆದಿದೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೂರು ಟ್ರೋಫಿ ಗೆದ್ದುಕೊಂಡು ಗರಿಷ್ಠ ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿದೆ. ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಲಾ 2 ಬಾರಿ ಟ್ರೋಫಿ ಗೆದ್ದುಕೊಂಡಿದೆ. ಇತ್ತ ಹಾಲಿ ಚಾಂಪಿಯನ್ ತಂಡ ಮತ್ತೆ ಟ್ರೋಫಿ ಗೆದ್ದುಕೊಂಡಿದ್ದು ಇದೇ ಮೊದಲು. ಇದೇ ಮೊದಲ ಬಾರಿಗೆ ಸತತ 2ಬಾರಿ ಟ್ರೋಫಿ ಗೆದ್ದ ಸಾಧನೆಯನ್ನು ಟೀಂ ಇಂಡಿಯಾ ಮಾಡಿದೆ. ಇನ್ನು ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿ ಆಯೋಜಿಸಿದ ದೇಶ ಟ್ರೋಫಿ ಗೆದ್ದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments