HomeSportಟಿ-20 ವಿಶ್ವಕಪ್ | ಭಾರತ ವಿರುದ್ಧ ಆಡುವುದಿಲ್ಲ ಎಂದು ಪಾಕಿಸ್ತಾನ ಘೋಷಣೆ

ಟಿ-20 ವಿಶ್ವಕಪ್ | ಭಾರತ ವಿರುದ್ಧ ಆಡುವುದಿಲ್ಲ ಎಂದು ಪಾಕಿಸ್ತಾನ ಘೋಷಣೆ

ಟಿ-20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ ಮತ್ತೊಂದು ವಿವಾದ ಭುಗಿಲೆದ್ದಿದೆ. ಭಾರತ ತಂಡದ ವಿರುದ್ಧ ಆಡುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಘೋಷಿಸಿದೆ.

ಇಷ್ಟು ದಿನ ಬಾಂಗ್ಲಾದೇಶ ಹಾಗೂ ಭಾರತದ ನಡುವಿನ ವಿವಾದವನ್ನು ಬಗೆಹರಿಸಲು ಹರಸಾಹಸ ಪಟ್ಟಿದ್ದ ಐಸಿಸಿಗೆ ಇದೀಗ ಮತ್ತೊಂದು ಹೊಸ ತಲೆನೋವು ಆರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಟಿ20 ವಿಶ್ವಕಪ್​ನಲ್ಲಿ ನಮ್ಮ ತಂಡ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಐಸಿಸಿಗೆ ದೊಡ್ಡ ಶಾಕ್ ನೀಡಿದೆ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆ ಕುರಿತ ಗೊಂದಲ ಪರಿಹಾರವಾಗಿದ್ದು, ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಭಾಗವಹಿಸುತ್ತಿದೆ ಎಂದು ಪಿಸಿಬಿ ಸ್ಪಷ್ಟಪಡಿಸಿದೆ. ಆದರೆ ಭಾರತ ತಂಡದ ವಿರುದ್ಧ ಆಡುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೊಸ ಟ್ವಿಸ್ಟ್ ನೀಡಿದೆ.

ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಬೇಕಿದ್ದ ಭಾರತದ ವಿರುದ್ಧದ ಗುಂಪು ಹಂತದ ಪಂದ್ಯವನ್ನು ಆಡುವುದಿಲ್ಲ ಎಂದು ಹೇಳಿದೆ. ರಾಜಕೀಯ ಮತ್ತು ಇತ್ತೀಚಿನ ಬೆಳವಣಿಗೆಗಳ ನಡುವೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಿಸಿಬಿ ಹೇಳಿದೆ.

ರಾಜಕೀಯ ಕಾರಣಗಳಿಂದಾಗಿ ಪಾಕಿಸ್ತಾನ ತಂಡ ಭಾರತದಲ್ಲಿ ಆಡಲು ನಿರಾಕರಿಸಿದ್ದರಿಂದ, ಐಸಿಸಿ ಪಾಕ್ ತಂಡದ ಪಂದ್ಯಗಳನ್ನು ತಟಸ್ಥ ಸ್ಥಳಗಳಿಗೆ ಸ್ಥಳಾಂತರಿಸಿತ್ತು. ಅದರಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಕೊಲಂಬೊದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೀಗ, ಪಾಕಿಸ್ತಾನ ಸರ್ಕಾರ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದೆ.

ಭಾರತ ಮತ್ತು ಪಾಕಿಸ್ತಾನ ಪಂದ್ಯವು ವಿಶ್ವಕಪ್‌ನಲ್ಲಿ ಹೆಚ್ಚು ವೀಕ್ಷಿಸಲ್ಪಟ್ಟ ಮತ್ತು ಆದಾಯ ಗಳಿಸುವ ಪಂದ್ಯವಾಗಿದೆ. ಇದೀಗ ಈ ಪಂದ್ಯ ನಡೆಯದಿರುವುದರಿಂದ ಐಸಿಸಿಗೆ ನಷ್ಟವಾಗುವುದು ಮಾತ್ರವಲ್ಲದೆ, ಪಾಕಿಸ್ತಾನ ಕೂಡ ಗಮನಾರ್ಹ ನಷ್ಟವನ್ನು ಎದುರಿಸಬೇಕಾಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments